ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೀತಿ ಒಪ್ಪದೆ ದೂರವಾದ ಮಹಿಳೆ: ಯುವಕ ಆತ್ಮಹತ್ಯೆ

Published 8 ಫೆಬ್ರುವರಿ 2024, 14:57 IST
Last Updated 8 ಫೆಬ್ರುವರಿ 2024, 14:57 IST
ಅಕ್ಷರ ಗಾತ್ರ

ಬೆಂಗಳೂರು: ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಅನ್ಬುರಾಜನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಚೋದನೆ ನೀಡಿದ್ದ ಆರೋಪದಡಿ ಮಹಿಳೆಯೊಬ್ಬರ ವಿರುದ್ಧ ದೂರು ದಾಖಲಾಗಿದೆ.

‘ಅನ್ಬುರಾಜನ್ ಅವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಜೊತೆಗೆ ಸಲುಗೆ ಇಟ್ಟುಕೊಂಡಿದ್ದ ಮಹಿಳೆಯೇ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ ಪೋಷಕರು ದೂರು ನೀಡಿದ್ದಾರೆ. ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆರೋಪಿ ಮಹಿಳೆ, ಪತಿಯಿಂದ ದೂರವಾಗಿ ಪ್ರತ್ಯೇಕವಾಗಿ ವಾಸವಿದ್ದರು. ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೂ ಅನ್ಬುರಾಜನ್‌ಗೂ ಪರಿಚಯವಾಗಿ, ಸ್ನೇಹ ಬೆಳೆದಿತ್ತು. ಇಬ್ಬರೂ ಸಲುಗೆಯಿಂದ ಇದ್ದರೆಂದು ಹೇಳಲಾಗುತ್ತಿದೆ.’

‘ಪ್ರೀತಿ ಬೇಡವೆಂದು ದೂರವಾಗಿದ್ದ ಮಹಿಳೆ, ಅನ್ಬುರಾಜನ್ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದರು. ಮಹಿಳೆಗೆ ಬೇರೊಬ್ಬ ಪುರುಷನ ಜೊತೆ ಸಲುಗೆ ಏರ್ಪಟ್ಟಿತ್ತೆಂದು ಹೇಳಲಾಗುತ್ತಿದೆ. ಇದರಿಂದ ನೊಂದಿದ್ದ ಅನ್ಬುರಾಜನ್, ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT