ಬುಧವಾರ, ಜೂನ್ 29, 2022
26 °C

ಎಸ್‌.ಟಿ ಪಟ್ಟಿಗೆ ಪರಿವಾರ, ತಳವಾರ ಸೇರ್ಪಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಿಂದುಳಿದ ವರ್ಗಗಳ ಪ್ರವರ್ಗ–1ರಲ್ಲಿದ್ದ ಪರಿವಾರ ಮತ್ತು ತಳವಾರ ಸಮುದಾಯಗಳನ್ನು ಪರಿಶಿಷ್ಟ ಪಂಗಡಗಳ (ಎಸ್‌.ಟಿ) ಪಟ್ಟಿಗೆ ಸೇರಿಸಿ ಸಮಾಜ ಕಲ್ಯಾಣ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.

ಈ ಎರಡೂ ಸಮುದಾಯಗಳ ಜನರಿಗೆ ಪರಿಶಿಷ್ಟ ಪಂಗಡಗಳ ಅಡಿಯಲ್ಲಿ ಜಾತಿ ಪ್ರಮಾಣಪತ್ರ ವಿತರಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ಧಿ ಸಮುದಾಯದ ಜನರನ್ನು ಮಾತ್ರ ಈ ಹಿಂದೆ ಎಸ್‌.ಟಿ ಪಟ್ಟಿಗೆ ಸೇರಿಸಲಾಗಿತ್ತು. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಸಿದ್ಧಿ ಸಮುದಾಯದ ಜನರಿಗೂ ಎಸ್‌.ಟಿ ಅಡಿಯಲ್ಲಿ ಜಾತಿ ಪ್ರಮಾಣಪತ್ರ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು