ಬೆಂಗಳೂರು: ನಗರದಲ್ಲಿ ಮುಂದುವರಿದ ಮಳೆ

ಬೆಂಗಳೂರು: ರಾಜಧಾನಿಯ ಹಲವು ಕಡೆ ಸೋಮವಾರ ಸಂಜೆ ಧಾರಾಕಾರ ಮಳೆಯಾಗಿದೆ. ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದವರು ಪರದಾಡಿದರು. ನಗರದಲ್ಲಿ ಶನಿವಾರ ಹಾಗೂ ಭಾನುವಾರವೂ ಧಾರಾಕಾರ ಮಳೆ ಸುರಿದಿತ್ತು.
ಯಶವಂತಪುರ, ರಾಜಾಜಿನಗರ, ಪೀಣ್ಯ, ಎಂ.ಜಿ. ರಸ್ತೆ, ಕೋರಮಂಗಲ, ಚಿಕ್ಕಪೇಟೆ, ಕೆ.ಆರ್.ಮಾರುಕಟ್ಟೆ, ಬಸವನಗುಡಿ, ಮೆಜೆಸ್ಟಿಕ್ ಸುತ್ತಮುತ್ತಲ ಪ್ರದೇಶದಲ್ಲಿ ಮಳೆ ಸುರಿದಿದೆ. ಮಡಿವಾಳ, ಕೋರಮಂಗಲ, ಆಡುಗೋಡಿ, ಅಶೋಕನಗರ, ಹಲಸೂರು, ದುಮ್ಮಲೂರು, ಎಚ್‌ಎಎಲ್, ಬೈಯಪ್ಪನಹಳ್ಳಿ, ಬೆಳ್ಳಂದೂರು, ಮಾರತ್ತಹಳ್ಳಿ, ಶಿವಾಜಿನಗರ, ಕೆ.ಜಿ.ಹಳ್ಳಿ, ಪುಲಿಕೇಶಿನಗರ, ವಸಂತನಗರದಲ್ಲೂ ಬಿಡುವು ಕೊಟ್ಟು ಮಳೆಯಾಗಿದೆ.
ಕೆಲವು ಬಡಾವಣೆಗಳಲ್ಲಿ ದಿಢೀರ್ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ಹೊಳೆಯಂತೆ ಹರಿಯಿತು. ರಸ್ತೆ ದುರಸ್ತಿಗಾಗಿ ಅಗೆದ ಸ್ಥಳದಲ್ಲಿ ಮಳೆಯ ನೀರು ಸಂಗ್ರಹಗೊಂಡು ವಾಹನ ಸವಾರರು ಪರದಾಡಿದರು.
ನಗರದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.