ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇವನೆ

Last Updated 8 ಮಾರ್ಚ್ 2023, 20:51 IST
ಅಕ್ಷರ ಗಾತ್ರ

ದೇವನಹಳ್ಳಿ: ಕೋಲ್ಕತ್ತಾದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಯುವತಿ, ಇಂಡಿಗೊ ವಿಮಾನದ ಒಳಗಿನ ಶೌಚಾಲಯದಲ್ಲಿ ಸಿಗರೇಟ್‌ ಸೇವನೆ ಮಾಡಿದ್ದು ಆಕೆಯನ್ನು ಪೊಲೀಸರು ಬಂಧಿಸಿದ್ದರು.

ಮಾರ್ಚ್‌ 5ರಂದು ಘಟನೆ ನಡೆದಿದ್ದು, ಆರೋಪಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಕೆ. ಶಂಕರ್‌ ನೀಡಿದ್ದ ದೂರಿನ ಅನ್ವಯ ಇಂಡಿಗೊ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದ ಪಶ್ಚಿಮ ಬಂಗಾಳದ ಸಿ.ಪ್ರಿಯಾಂಕಾ ಅವರನ್ನು ಬಂಧಿಸಲಾಗಿತ್ತು. ಆಕೆ ವಿಮಾನ ಇಳಿದ ಕೂಡಲೇ ವಶಕ್ಕೆ ಪಡೆದುಕೊಳ್ಳಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಆಕೆಯ ವಿರುದ್ಧ ನಿರ್ಲಕ್ಷ್ಯದಿಂದ ಮಾನವ ಜೀವನಕ್ಕೆ ಅಪಾಯ ತರುವ ಹಾಗೂ ಸುರಕ್ಷತೆಗೆ ಧಕ್ಕೆ ತರುವ ವರ್ತನೆಯ ಆಧಾರದಲ್ಲಿ ಐಪಿಸಿ ಸೆಕ್ಷನ್‌ 336ರ ಅಡಿಯಲ್ಲಿ ಎಫ್‌ಐಆರ್‌ ದಾಖಲು ಮಾಡಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT