ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ತಿಂಡ್ಲು ನಿವಾಸಿ ರಮೇಶ್ (35) ಅವರನ್ನು ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಭಾನುವಾರ ಮೃತಪಟ್ಟಿದ್ದಾರೆ.
‘ವೈದ್ಯರು ಸರಿಯಾದ ಚಿಕಿತ್ಸೆ ನೀಡಿಲ್ಲ. ಅವರ ನಿರ್ಲಕ್ಷ್ಯದಿಂದಲೇ ರಮೇಶ್ ಮೃತಪಟ್ಟಿದ್ದಾರೆ’ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ವಿಷಯ ತಿಳಿದು ನೂರಾರು ಜನ ಆಸ್ಪತ್ರೆ ಎದುರು ಜಮಾಯಿಸಿದರು. ‘ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು. ಕೊಡಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಬಂದು ಪ್ರತಿಭಟನಕಾರರನ್ನು ಚದುರಿಸಿದರು.