ಸೋಮವಾರ, ಸೆಪ್ಟೆಂಬರ್ 28, 2020
28 °C
46 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಸಾವು

ಐಸಿಯು ಹಾಸಿಗೆ ಸಿಗದೆ ರೋಗಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೆಂಟಿಲೇಟರ್ ಸಹಿತ ಐಸಿಯು ಹಾಸಿಗೆ ಸಿಗದೆ 46 ವರ್ಷದ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ನಗರದಲ್ಲಿ ಮೃತಪಟ್ಟಿದ್ದಾರೆ. 

ಗಂಭೀರವಾಗಿ ಅಸ್ವಸ್ಥರಾಗಿದ್ದ ಅವರನ್ನು ಬೊಮ್ಮನಹಳ್ಳಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ಸರ್ಕಾರದ ಶಿಫಾರಸ್ಸಿನ ಅನುಸಾರ ಕಳುಹಿಸಲಾಗಿತ್ತು. ಆದರೆ, ಅಲ್ಲಿ ವೆಂಟಿಲೇಟರ್ ಸಹಿತ ಐಸಿಯು ಹಾಸಿಗೆ ಖಾಲಿಯಿರಲಿಲ್ಲ. ಹೀಗಾಗಿ, ಅಪೋಲೊ ಆಸ್ಪತ್ರೆಗೆ ಕರೆದೊಯ್ಯುವಾಗ ರೋಗಿ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ಸರ್ಕಾರ ಮಾಹಿತಿಯ ಪ್ರಕಾರ, ನಗರದ ಸರ್ಕಾರಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ 144 ವೆಂಟಿಲೇಟರ್ ಸಹಿತ ಐಸಿಯು ಹಾಸಿಗೆಗಳಿವೆ. ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ 418 ವೆಂಟಿಲೇಟರ್ ಸಹಿತ ಐಸಿಯು ಹಾಸಿಗೆ ಲಭ್ಯವಿದೆ. ನಗರದಲ್ಲಿ ಸದ್ಯ 263 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು