ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಶಾಸಕರಿಂದ ಪಟ್ಟಂದೂರು ಕೆರೆ ಅತಿಕ್ರಮಣ: ಎಎಪಿ ಆರೋಪ

ಆಮ್‌ ಆದ್ಮಿ ಪಕ್ಷ ಆರೋಪ
Last Updated 1 ಏಪ್ರಿಲ್ 2022, 20:10 IST
ಅಕ್ಷರ ಗಾತ್ರ

ಬೆಂಗಳೂರು: ‘ಶಾಸಕರಾದ ಕೆ.ಜೆ.ಜಾರ್ಜ್‌ ಮತ್ತು ಅರವಿಂದ ಲಿಂಬಾವಳಿ ಅವರು ಒಳಒಪ್ಪಂದ ಮಾಡಿಕೊಂಡು, ಮಹದೇವಪುರ ವ್ಯಾಪ್ತಿಯ ಪಟ್ಟಂದೂರು ಅಗ್ರಹಾರ ಕೆರೆಯ ಬಫರ್‌ ವಲಯವನ್ನು ಅತಿಕ್ರಮಣ ಮಾಡುತ್ತಿದ್ದಾರೆ’ ಎಂದು ಆಮ್‌ ಆದ್ಮಿ ಪಕ್ಷದಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್‌ ದಾಸರಿ ಆರೋಪಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಶಾಸಕ ಕೆ.ಜೆ.ಜಾರ್ಜ್‌ ಅವರ ಜಮೀನಿಗೆ ರಸ್ತೆ ನಿರ್ಮಿಸಲು ಪಟ್ಟಂದೂರು ಅಗ್ರಹಾರ ಕೆರೆಯ ಬಫರ್‌ ವಲಯ ಹಾಗೂ ಸಮೀಪದ ರಾಜಕಾಲುವೆಯನ್ನು ಒತ್ತುವರಿ ಮಾಡಲಾಗುತ್ತಿದೆ. ರಸ್ತೆ ನಿರ್ಮಾಣವನ್ನು ವಿರೋಧಿಸಿದ್ದ ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಅವರೇ ಈಗ ಅಕ್ರಮಕ್ಕೆ ಸಹಕಾರ ನೀಡುತ್ತಿದ್ದಾರೆ. ಇವರಿಬ್ಬರ ಸ್ವಾರ್ಥಕ್ಕೆ ಕೆರೆ ಬತ್ತಿ ಹೋಗುವ ಸಾಧ್ಯತೆಯಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಪಟ್ಟಂದೂರು ಕೆರೆಯ ಬಫರ್‌ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಯೋಜನೆ ಅಪಾಯಕಾರಿ ಎಂದು ತಜ್ಞರ ಸಮಿತಿ ಎಚ್ಚರಿಸಿದೆ. ಬಫರ್‌ ವಲಯ ಕೆರೆಯ ಅವಿಭಾಜ್ಯ ಅಂಗ. ಅದನ್ನು ಅತಿಕ್ರಮಿಸಿಕೊಂಡು ರಸ್ತೆ ನಿರ್ಮಿಸಿದರೆ, ಕೆರೆಗೆ ನೀರು ಬರುವುದು ಕಡಿಮೆಯಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT