ಮಂಗಳವಾರ, ಜೂನ್ 2, 2020
27 °C

ಮುಸ್ಲಿಂ ಮುಖಂಡರೊಂದಿಗೆ ಶಾಂತಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾಬಸ್‌ಪೇಟೆ: ತ್ಯಾಮಗೊಂಡ್ಲು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಕೃಷ್ಣಕುಮಾರ್‌ ಶನಿವಾರ ಮುಸ್ಲಿಂ ಸಮುದಾಯದ ನಾಯಕರೊಂದಿಗೆ ಸಭೆ ನಡೆಸಿದರು.

‘ಶುಕ್ರವಾರದ ನಮಾಜ್ ಮಾಡಲು ಮಸೀದಿಗಳಲ್ಲಿ ಒಟ್ಟುಗೂಡಬಾರದು. ತಮ್ಮ ಮನೆಗಳಲ್ಲಿಯೇ ನಮಾಜ್ ಮಾಡಬೇಕು ಹಾಗೂ ಕೊರೊನಾ ಸೋಂಕಿನ ಸಂಬಂಧ ಆಶಾ ಕಾರ್ಯಕರ್ತೆಯರು, ಕಂದಾಯ, ಆರೋಗ್ಯ ಇಲಾಖೆಯ ಅಧಿಕಾರಿಗಳು ತಮ್ಮ ಮನೆಗಳ ಹತ್ತಿರ ಮಾಹಿತಿ ಕಲೆ ಹಾಕಲು ಬಂದಾಗ ಅವರಿಗೆ ಸಹಕರಿಸಬೇಕು. ಯಾವುದೇ ರೀತಿಯ ಗೊಂದಲ ಸೃಷ್ಟಿಸದಂತೆ ಸಮುದಾಯದ ಜನರಿಗೆ ತಿಳಿಸಬೇಕು’ ಎಂದು ಮುಖಂಡರಿಗೆ ತಿಳಿಸಿದರು. ಸುಮಾರು 20ಕ್ಕೂ ಹೆಚ್ಚು ಮುಸ್ಲಿಂ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು