ಬೆಂಗಳೂರು: ಬಿಬಿಎಂಪಿಯ ಮಹದೇವಪುರ ವಲಯದ ಹೂಡಿ ಉಪವಿಭಾಗದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿಯನ್ನು ಪಾಲಿಕೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು.

ಹೂಡಿ ಉಪವಿಭಾಗ ವೃತ್ತದಿಂದ ಶಾಂತಿ ನಿಕೇತನ ಐಟಿಪಿಎಲ್ ರಸ್ತೆವರೆಗಿನ ಪ್ರಮುಖ ರಸ್ತೆಗಳಲ್ಲಿ ಸುಮಾರು 1 ಕಿ. ಮೀ.ವರೆಗೆ ಎರಡೂ ಬದಿಯಲ್ಲಿ ಪಾದಚಾರಿ ಮಾರ್ಗದ ಮೇಲೆಯೇ ಗೂಡಂಗಡಿ ನಿರ್ಮಿಸಿಕೊಂಡು ವ್ಯಪಾರ ವಹಿವಾಟು ನಡೆಸಲಾಗುತ್ತಿತ್ತು. ಅಂತಹ 16 ತಾತ್ಕಾಲಿಕ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಮಹದೇವಪುರ ವಲಯದ ಮುಖ್ಯ ಎಂಜಿನಿಯರ್ ಆರ್.ಎಲ್.ಪರಮೇಶ್ವರಯ್ಯ ತಿಳಿಸಿದ್ದಾರೆ.

ಪಾದಚಾರಿಗಳ ಸುರಕ್ಷತೆ ದೃಷ್ಟಿಯಿಂದ ಬೇರೆ ವಾರ್ಡ್ಗಳಲ್ಲೂ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.