ಬೆಂಗಳೂರು: ಮಹದೇವಪುರ ವಲಯದ ಹೊರಮಾವು, ಹೂಡಿ ಸರ್ಕಲ್ ಹಾಗೂ ದೊಡ್ಡಕಲ್ಲಳ್ಳಿಯ ಮುಖ್ಯ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿ ನಿರ್ಮಿಸಿದ್ದ ಅಂಗಡಿಗಳನ್ನು ಬಿಬಿಎಂಪಿ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು.

‘ವಾರ್ಡ್ 25, 26, 51, 54, 82 ಮತ್ತು 150ರ ಒಟ್ಟು 8.6 ಕೀ.ಮೀ ಉದ್ದದ ರಸ್ತೆಯ ಎರಡು ಬದಿಯಲ್ಲಿ ಪಾದಚಾರಿ ಮಾರ್ಗಗಳನ್ನು ಆಕ್ರಮಿಸಿಕೊಂಡು ವ್ಯಾಪಾರ ಮಾಡುತ್ತಿದ್ದರು ಎಂದು ಮುಖ್ಯ ಎಂಜಿನಿಯರ್ ಆರ್.ಎಲ್.ಪರಮೇಶ್ವರಯ್ಯ ತಿಳಿಸಿದ್ದಾರೆ.

ಒತ್ತುವರಿಯಿಂದ ಜನರ ಓಡಾಟಕ್ಕೆ ತೊಂದರೆ ಉಂಟಾಗಿತ್ತು. ಸ್ವಚ್ಛತೆಯನ್ನೂ ಕಾಪಾಡುತ್ತಿರಲಿಲ್ಲ. ಒಟ್ಟು 87 ತಾತ್ಕಾಲಿಕ ಹಾಗೂ 10 ಶಾಶ್ವತ ಅಂಗಡಿಗಳು ಪಾದಚಾರಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದನ್ನು ತೆರವುಗೊಳಿಸಲಾಗಿದೆ. ಉಳಿದ ವಾರ್ಡ್‍ಗಳಲ್ಲಿಯೂ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.