ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೀಣ್ಯ ದಾಸರಹಳ್ಳಿ: ಮನೆ ಮನೆ ಪ್ರಚಾರಕ್ಕೆ ಚಾಲನೆ

ದಾಸರಹಳ್ಳಿಯಲ್ಲಿ ಲೋಕಸಭಾ ಚುನಾವಣಾ ಪ್ರಚಾರ
Published 12 ಏಪ್ರಿಲ್ 2024, 16:02 IST
Last Updated 12 ಏಪ್ರಿಲ್ 2024, 16:02 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ‘ಕೇಂದ್ರ ಸಚಿವರಾಗಿ ಅನುಭವವಿರುವ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಮ್ಮ ಪಕ್ಷ ಕಣಕ್ಕಿಳಿಸಿದೆ. ನಮ್ಮ ಪಕ್ಷ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಸೇರಿ ಅಧಿಕ ಮತಗಳಿಂದ ಅವರನ್ನು ಗೆಲ್ಲಿಸಬೇಕು‘ ಎಂದು ಬಿಜೆಪಿ ಶಾಸಕ ಎಸ್. ಮುನಿರಾಜು ತಿಳಿಸಿದರು.

ಶೆಟ್ಟಿಹಳ್ಳಿ ವಾರ್ಡ್ ಬಿಜೆಪಿ ಅಧ್ಯಕ್ಷ ಬಿ. ಸುರೇಶ್ ನೇತೃತ್ವದಲ್ಲಿ ಆಯೋಜಿಸಲಾದ ಮನೆ ಮನೆಗೆ ಪ್ರಚಾರ ಕಾರ್ಯಕ್ಕೆ, ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.

‘ನಮ್ಮ ಕಾರ್ಯಕರ್ತರು ಬೆಳಿಗ್ಗೆ ಎರಡು ಗಂಟೆ ಮತ್ತು ಸಂಜೆ ಮೂರು ಗಂಟೆ ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕು. ದೇಶದ ಅಭಿವೃದ್ಧಿ ಮತ್ತು ಭದ್ರತೆಗೋಸ್ಕರ ಎನ್ ಡಿಎ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಬರಬೇಕು' ಎಂದರು.

ಇದೇ ವೇಳೆ ಶಾಸಕ ಎಸ್. ಮುನಿರಾಜು ಅವರು ಮಲ್ಲಸಂದ್ರ ವಾರ್ಡ್‌ನ ಆಂಜನೇಯ ದೇವಸ್ಥಾನ, ಬಾಗಲಗುಂಟೆ ವಾರ್ಡ್ ಮಾರಮ್ಮ ದೇವಿ ದೇವಸ್ಥಾನ ಮತ್ತು ದಾಸರಹಳ್ಳಿ ಉಮಾ ಮಹೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮನೆ ಮನೆ ಪ್ರಚಾರಕ್ಕೆ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT