ಪೀಣ್ಯ ದಾಸರಹಳ್ಳಿ: ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ದ್ವಿಚಕ್ರ ವಾಹನ ಸವಾರರ ಮೇಲೆ ಬುಡಸಮೇತ ಮರ ಉರುಳಿ ಬಿದ್ದ ಪರಿಣಾಮ ಯುವತಿ ಮೃತಪಟ್ಟಿದ್ದಾರೆ.

ಹೆಬ್ಬಾಳ ನಿವಾಸಿ ಕೀರ್ತನಾ (24) ಮೃತ ಯುವತಿ. ಘಟನೆಯಲ್ಲಿ ಬೈಕ್ ಸವಾರ ಭಾಸ್ಕರ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಠಾಣೆ ಮುಂಭಾಗದ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಕೀರ್ತನಾ ಮತ್ತು ಭಾಸ್ಕರ್ ತೆರಳುತ್ತಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಮರ ಬುಡ ಸಮೇತ ರಸ್ತೆಗೆ ಉರುಳಿ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಕೀರ್ತನಾ ಸ್ಥಳದಲ್ಲಿಯೇ ಮೃತಪಟ್ಟರು.

ಸೋಲದೇವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆ ಮೇಲೆ ಮರ ಬಿದ್ದ ಕಾರಣ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು. ಮರ ತೆರವು ಕಾರ್ಯಾಚರಣೆ ನಡೆಸಿದರು. ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಗೆ ರವಾನೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.