ಪೀಣ್ಯ ದಾಸರಹಳ್ಳಿ: 'ನಾವು ಚಿಕ್ಕದೊ, ದೊಡ್ಡದೊ ಮನೆ ಕಟ್ಟುತ್ತೇವೆ. ಆದರೆ, ಮನೆಯಲ್ಲಿ ನೆಮ್ಮದಿಯಾಗಿ ಇರಲು ಮಹಿಳೆ ಕಾರಣ' ಎಂದು ಹಾಸ್ಯ ಕಲಾವಿದೆ ಸುಧಾ ಬರಗೂರು ತಿಳಿಸಿದರು.

ರಾಮಯ್ಯ ಬಡಾವಣೆಯ ಅದ್ಯಾ ಫೌಂಡೇಷನ್ ಆಯೋಜಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಾನವ ಜನ್ಮತಾಳಿದಾಗಿಂದ ಮಗುವಿನ ಆರೈಕೆ ಜೊತೆಗೆ ಕುಟುಂಬದ ನಿರ್ವಹಣೆ ಮಾಡುವುದು ಒಂದು ಹೆಣ್ಣು. ಯಾರು ಎಷ್ಟೇ ಸಂಪಾದನೆ ಮಾಡಿದರೂ ಮನೆಯ ಎಲ್ಲಾ ಆಗುಹೋಗುಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಹೆಣ್ಣಿಗೆ ಇದೆ' ಎಂದು ಹೇಳಿದರು.

ಮಾಜಿ ಶಾಸಕ ಆರ್. ಮಂಜುನಾಥ್ ಮಾತನಾಡಿ,' ಈಗ ಮಹಿಳೆಯರು ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳುತ್ತಾ ಎಲ್ಲಾ ಕ್ಷೇತ್ರಗಳಲ್ಲಿ ಸ್ವಾಭಿಮಾನದಿಂದ ಬದಕುತ್ತಿದ್ದಾರೆ. ಆದರೆ, ಕೆಲವು ಕಡೆ ಇನ್ನೂ ಸಹ ಹೆಣ್ಣಿಗೆ ಬೆಂಬಲ ಸಿಗುತ್ತಿಲ್ಲ ಎಂಬ ಕೊರಗು ಇದ್ದೆ ಇದೆ' ಎಂದರು.

ಕಾರ್ಯಕ್ರಮದಲ್ಲಿ ಮಾಹಿತಿ ಹಕ್ಕು ಆಯೋಗದ ಆಯುಕ್ತೆ ಮಮತಾ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರು ಭಾಗವಹಿಸಿದ್ದರು. ಪಾಲಿಕೆಯ ಮಾಜಿ ಸದಸ್ಯ ಕೆ. ನಾಗಭೂಷಣ್, ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಕೆ.ಸಿ. ವೆಂಕಟೇಶ್, ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಬಿ.ಎನ್. ಜಗದೀಶ್, ಕಾಂಗ್ರೆಸ್ ಮುಖಂಡರಾದ ಎಬಿಬಿ ಮಂಜುನಾಥ್, ಲಗ್ಗೆರೆ ಕೃಷ್ಣಮೂರ್ತಿ ಹಾಗೂ ಇತರರು ಹಾಜರಿದ್ದರು.

ಸುಮಾರು 1000ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ಮಾಜಿ ಶಾಸಕ ಆರ್. ಮಂಜುನಾಥ್ ಅವರು ಎಲ್ಲರಿಗೂ ಉಡುಗೊರೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.