ಪೀಣ್ಯ ದಾಸರಹಳ್ಳಿ: ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣಾವರ ದ್ವಾರಕಾ ನಗರದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದು ಮಗುವೊಂದು ಮೃತಪಟ್ಟಿದೆ.

ಇಮಾಮ್ ಮತ್ತು ರಮೀಜಾ ದಂಪತಿಯ ಮಗಳು ಗೌಸಿಯಾ (5) ಮೃತಪಟ್ಟಿದ್ದಾಳೆ. ಇಮಾಮ್ ಅವರ ತಂಗಿ ಶಕೀಲಾ ಅವರ ಮಗಳು ಸುಮಯಾ (3) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ

ಇಮಾಮ್–ರಮೀಜಾ ದಂಪತಿ ಹಣ್ಣು ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ದ್ವಾರಕಾ ನಗರದಲ್ಲಿ ಇರುವ ರವಿಶಂಕರ್ ಅವರ ಮನೆಗೆ ಐದು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದರು. ಮನೆಯ ಎದುರು ಮಕ್ಕಳು ಶನಿವಾರ ಆಟವಾಡುತ್ತಿದ್ದರು. ಆಗ ಕಬ್ಬಿಣದ ಗೇಟ್ ಮಕ್ಕಳ ಮೇಲೆಯೇ ಬಿದ್ದಿದೆ. ಗೇಟ್ ಬಿದ್ದ ರಭಸಕ್ಕೆ ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದೆ ಎಂದು ಮೂಲಗಳು ಹೇಳಿವೆ.

ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುವುದು ಎಂದು ಮೂಲಗಳು ಹೇಳಿವೆ. ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.