ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದಚಾರಿಗಳಿಂದ ಮೊಬೈಲ್ ಕಿತ್ತೊಯ್ದ ಕಳ್ಳರು

Last Updated 23 ಡಿಸೆಂಬರ್ 2021, 19:33 IST
ಅಕ್ಷರ ಗಾತ್ರ

ಬೆಂಗಳೂರು: ಮಧ್ಯರಾತ್ರಿ ಸಂಬಂಧಿಕರೊಬ್ಬರ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಪಾದಚಾರಿಗಳನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಅವರಿಂದ ₹10 ಸಾವಿರ ನಗದು ಹಾಗೂ ಎರಡು ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಅಂಜನಾಮೂರ್ತಿ ಹಾಗೂ ನರಸಿಂಹಮೂರ್ತಿ ಎಂಬುವರು ರಾತ್ರಿ 2.15ರ ಸುಮಾರಿಗೆ ನೆಲಗದರನಹಳ್ಳಿಯ ರುಕ್ಮಿಣಿ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರನ್ನು ಹೆದರಿಸಿ ಹಣ ಮತ್ತು ಮೊಬೈಲ್‌ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಅವರು ಠಾಣೆಗೆ ಬಂದು ದೂರು ನೀಡಿದ್ದು, ಆರೋಪಿಗಳಿಗಾಗಿ ಹುಡುಕುತ್ತಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT