ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ಕೇರಿಗಳಲ್ಲಿ ಪೇಜಾವರ ಶ್ರೀ ಪಾದಯಾತ್ರೆ

Last Updated 4 ಸೆಪ್ಟೆಂಬರ್ 2021, 2:05 IST
ಅಕ್ಷರ ಗಾತ್ರ

ಬೆಂಗಳೂರು: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗವಿಪುರ, ಗುಟ್ಟಹಳ್ಳಿ, ಕೆ.ಜಿ.ನಗರದ ದಲಿತ‌ ಕೇರಿಗಳಲ್ಲಿ ಪಾದಯಾತ್ರೆ ನಡೆಸಿದರು.

ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ ಜೊತೆ ದಲಿತ ಕೇರಿಗಳಲ್ಲಿ ಪಾದಯಾತ್ರೆ ನಡೆಸಿದ ಅವರು, ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗವಹಿಸಿದ್ದರು.

ಬಡಾವಣೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ತಳಿರು ತೋರಣಗಳಿಂದ ಬೀದಿಗಳನ್ನು ಅಲಂಕರಿಸಲಾಗಿತ್ತು. ಕೃಷ್ಣವೇಷ ತೊಟ್ಟ ಮಕ್ಕಳು ಸ್ವಾಮೀಜಿಗಳನ್ನು ಬರ ಮಾಡಿಕೊಂಡರು. ಮಹಿಳೆಯರು ಸ್ವಾಮೀಜಿ ಅವರು ಪಾದ ತೊಳೆದು ಹೂಮಳೆಗರೆದರು.

ಸಾಮೂಹಿಕ ರಾಮ–ಕೃಷ್ಣ ಭಜನೆ ನಡೆಯಿತು. ತಮಿಳು ಭಾಷಿಕರೇ ಹೆಚ್ಚಿರುವ ಬಡಾವಣೆಗಳಲ್ಲಿ ಸ್ವಾಮೀಜಿ ತಮಿಳಿನಲ್ಲೇ ಮಾತನಾಡಿದರು. ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ದಲಿತ ಸಮುದಾಯದವರು ಹೆಚ್ಚಿರುವ ಬಡಾವಣೆಗಳಲ್ಲಿ ಸಭೆ ನಡೆಸಲಾಗುತ್ತಿದೆ ಎಂದು ಮಠದ ಸಿಬ್ಬಂದಿ ಸ್ಪಷ್ಟಪಡಿಸಿದರು.

ಪೇಜಾವರದ ಈ ಹಿಂದಿನ ಶ್ರೀಗಳಾದ ವಿಶ್ವೇಶತೀರ್ಥ ಸ್ವಾಮೀಜಿ 2009ರಲ್ಲಿ ಮೈಸೂರಿನಲ್ಲಿ ಮೊದಲ ಬಾರಿಗೆ ದಲಿತ ಕೇರಿಗಳಲ್ಲಿ ಪಾದಯಾತ್ರೆ ನಡೆಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT