ಬೆಂಗಳೂರು: ಪಿಂಚಣಿದಾರರಿಗೆ ಅನ್ಯಾಯವಾಗುವ ಕೇಂದ್ರ ಆರ್ಥಿಕ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಕಬ್ಬನ್ ಪಾರ್ಕ್ ಆವರಣದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿ ಮುಂಭಾಗದಲ್ಲಿ ಸಂಘದ ಅಧ್ಯಕ್ಷ ಎಲ್.ಬೈರಪ್ಪ ಅವರ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಕೇಂದ್ರದ ವಿರುದ್ದ ಘೋಷಣೆ ಕೂಗಲಾಯಿತು.

‘2026ರ ಜನವರಿ 1ರಿಂದ ಪೂರ್ವಾನ್ವತವಾಗುವಂತೆ ಪಿಂಚಣಿದಾರರನ್ನು ವಿಭಜಿಸಿ ಮುಂದೆ ವೇತನ ಪರಿಷ್ಕರಣೆಯಾಗಲಿ, ಆರ್ಥಿಕ ವರ್ಷದಲ್ಲಿ ನೀಡುವ ಎರಡು ತುಟ್ಟಿ ಭತ್ಯೆಯಾಗಲಿ ಮಂಜೂರು ಮಾಡುವುದಿಲ್ಲ’ ಎಂದು ಕೇಂದ್ರ ಸರ್ಕಾರದ ಹಣಕಾಸು ಸಚಿವರು 2025ರ ಮಾರ್ಚ್ನಲ್ಲಿ ವಿಧೇಯಕ ಮಂಡಿಸುವಾಗಲೇ ಹೇಳಿದ್ದಾರೆ. ಮುಂದೆ ಇದು ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೂ ಅನ್ವಯವಾಗುವ ಸಾಧ್ಯತೆ ಇರುವುದರಿಂದ ಪ್ರತಿಭಟನೆ ನಡೆಸುತ್ತಿದ್ದೇವೆ’ ಎಂದು ಬಿ.ಎಲ್. ಬೈರಪ್ಪ ಹೇಳಿದರು.

‘ಈಗಾಗಲೇ ಉತ್ತರ ಭಾರತದ ರಾಜ್ಯಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನಿವೃತ್ತ ನೌಕರರು ಒಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆಂಧ್ರಪ್ರದೇಶ,ತೆಲಂಗಾಣ ನಂತರ ನಮ್ಮಲ್ಲೂ ಈಗ ವಿರೋಧ ವ್ಯಕ್ತವಾಗುತ್ತಿದೆ. ನಿವೃತ್ತ ನೌಕರರು ಜಂಟಿಯಾಗಿ ಹೋರಾಟ ಮಾಡಿ ಕೇಂದ್ರ ಸರ್ಕಾರಕ್ಕೆ ನಿವೃತ್ತರ ಸಂಘಟನಾ ಶಕ್ತಿ ಪ್ರದರ್ಶಿಸೋಣ. ತಪ್ಪಿದಲ್ಲಿ ಸಂಧ್ಯಾಕಾಲದ ಸ್ವಾಭಿಮಾನದ ಬದುಕು ಕಳವಳಕಾರಿ ಆಗಲಿದೆ’ ಎಂದು ಎಚ್ಚರಿಸಿದರು.

‘ದಿವಂಗತ ಡಿ.ಎನ್.ನಕರ ಅವರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನ ಅಂದಿನ ನ್ಯಾ.ಚಂದ್ರಚೂಡ್ ಅವರ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ಪಿಂಚಣಿಯು ಸಾಮಾಜಿಕ ಕಲ್ಯಾಣ ಕ್ರಮವಾಗಿದ್ದು, ತಮ್ಮ ವೃದ್ಧಾಪ್ಯದಲ್ಲಿ ಜೀವನ ನಡೆಸಲು ಆರ್ಥಿಕವಾಗಿ ಸಹಾಯವಾಗುತ್ತದೆ ಎಂದು ತೀರ್ಪು ನೀಡಿದೆ. ಕಾಯ್ದೆ ಕೂಡಲೇ ಹಿಂಪಡೆಯಬೇಕು ಎಂದು ಎಲ್ಲಾ ರಾಜ್ಯಗಳ ಸರ್ಕಾರಿ ನಿವೃತ್ತ ನೌಕರರ ಸಂಘಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿವೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.