ಭಾನುವಾರ, ಡಿಸೆಂಬರ್ 6, 2020
22 °C

ಹಬ್ಬಕ್ಕೆ ಹೊರಟ ಜನ: ಸಂಚಾರ ದಟ್ಟಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಸರಾ ಹಬ್ಬ ಆಚರಣೆಗಾಗಿ ಶನಿವಾರ ಬೆಳಿಗ್ಗೆಯಿಂದಲೇ ಜನರು ತಮ್ಮೂರಿನತ್ತ ಹೊರಟರು. ಇದರಿಂದಾಗಿ ನಗರದ ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ವಿಪರೀತ ಸಂಚಾರ ದಟ್ಟಣೆ ಕಂಡುಬಂತು.

ನಗರದಲ್ಲಿ ನೆಲೆಸಿರುವ ಸಾರ್ವಜನಿಕರು, ತಮ್ಮೂರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಬಸ್ ನಿಲ್ದಾಣಗಳತ್ತ ಬಂದರು. ಮೆಜೆಸ್ಟಿಕ್‌ ಬಸ್‌ ನಿಲ್ದಾಣ, ನಮ್ಮ ಮೆಟ್ರೊ ನಿಲ್ದಾಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಗರ ರೈಲು ನಿಲ್ದಾಣ ಹಾಗೂ ಸುತ್ತಮುತ್ತ ಜನರು ಗುಂಪಾಗಿ ನಿಂತಿದ್ದು ಕಂಡುಬಂತು. ಕೊರೊನಾ ಸೋಂಕು ಹರಡುವಿಕೆ ಭೀತಿಯಲ್ಲಿ ಬಹುತೇಕರು ಮಾಸ್ಕ್ ಧರಿಸಿದ್ದರು.  

ಆನಂದರಾವ್‌ ವೃತ್ತ, ಚಾಲುಕ್ಯ ವೃತ್ತ, ಮೈಸೂರು ರಸ್ತೆ, ಯಶವಂತಪುರ, ಆರ್‌ಎಂಸಿ ಯಾರ್ಡ್‌, ತುಮಕೂರು ರಸ್ತೆ, ಹೊಸೂರು ರಸ್ತೆಗಳಲ್ಲಿ ಸಂಚಾರ ದಟ್ಟಣೆ ತೀವ್ರವಾಗಿತ್ತು. 

ಪ್ರಮುಖ ರಸ್ತೆಗಳಲ್ಲೂ ವಾಹನಗಳ ದಟ್ಟಣೆ ಇತ್ತು. ಬಹುತೇಕರು, ಖಾಸಗಿ ವಾಹನಗಳಲ್ಲಿ ಊರಿನತ್ತ ಹೊರಟಿದ್ದರು. ನೆಲಮಂಗಲ, ದೇವನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ಟೋಲ್‌ಗೇಟ್‌ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ತುಮಕೂರು ರಸ್ತೆಯಲ್ಲಿ ದಟ್ಟಣೆ ಪ್ರಮಾಣ ಹೆಚ್ಚಿತ್ತು. ವಾಹನಗಳೂ ಭರ್ತಿಯಾಗಿದ್ದವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು