ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳೆಗೇರಿ ಕುಟುಂಬಗಳಿಗೆ ಶಾಶ್ವತ ನೆಲೆ: ಸಚಿವ ಜಮೀರ್‌ ಅಹ್ಮದ್‌ ಖಾನ್‌

Published 29 ಜೂನ್ 2023, 17:00 IST
Last Updated 29 ಜೂನ್ 2023, 17:00 IST
ಅಕ್ಷರ ಗಾತ್ರ

ಬೆಂಗಳೂರು: ಕೊಳೆಗೇರಿಗಳಲ್ಲಿ ವಾಸಿಸುವ ಮೂರು ಸಾವಿರ ಕುಟುಂಬಗಳಿಗೆ ಶಾಶ್ವತ ವಸತಿ ಕಲ್ಪಿಸಲು ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದರು.

ಕೊಳೆಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಶುಕ್ರವಾರ ಕೊಳೆಗೇರಿ ವಾಸಿಗಳು, ಕೊಳೆಗೇರಿ ನಿವಾಸಿಗಳ ಪರವಾದ ಸಂಘ- ಸಂಸ್ಥೆಗಳಿಂದ ಅಹವಾಲು ಸ್ವೀಕರಿಸಿದ ನಂತರ ಅವರು ಮಾತನಾಡಿದರು.

ಘೋಷಿತ ಕೊಳೆಗೇರಿ ಪ್ರದೇಶಗಳಲ್ಲಿ ವಾಸವಿದ್ದರೂ, ಹಲವು ಜನರಿಗೆ ಸೂರಿಲ್ಲ. ಹತ್ತಾರು ವರ್ಷಗಳಿಂದ ಗುಡಿಸಲು ಹಾಗೂ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಕೆರೆಯಂಗಳ, ಮಳೆ ನೀರು ಹರಿಯುವ ಕಾಲುವೆ, ವಿದ್ಯುತ್‌ ಮಾರ್ಗ, ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಮನೆ ಕಟ್ಟಿಕೊಡಲು ಸಾಧ್ಯವಾಗಿಲ್ಲ. ಹಾಗಾಗಿ, ಅವರಿಗೆಲ್ಲ ಪ್ರತ್ಯೇಕ ಸ್ಥಳದಲ್ಲಿ ಶಾಶ್ವತ ನೆಲೆ ಕಲ್ಪಿಸಲಾಗುವುದು ಎಂದರು.

ಕೆ.ಆರ್.ಪುರ ಹೋಬಳಿ ಬಿದರಹಳ್ಳಿಯಲ್ಲಿ ಎಂಟು ಎಕರೆ ಗುರುತಿಸಲಾಗಿದೆ. ಕಂದಾಯ ಸಚಿವರ ಜತೆ ಚರ್ಚಿಸಿ, ಭೂಮಿ ಪಡೆದು ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ವಸತಿ ಸಮುಚ್ಚಯ ನಿರ್ಮಿಸಲಾಗುವುದು. ಕಾಚರಕನಹಳ್ಳಿ ಕೆರೆ ವ್ಯಾಪ್ತಿ, ಗೋವಿಂದರಾಜ ನಗರದ ವಿನಾಯಕ ಬಡಾವಣೆ, ಉತ್ತರಹಳ್ಳಿಯ ರಸ್ತೆಯ ಕೊಡಿಪಾಳ್ಯ, ದೊಡ್ಡ ಆಲದಮರ ಸಮೀಪದ ಭೀಮನಕುಪ್ಪೆ, ದಾಸರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಬ್ಯಾಟರಾಯನಪುರ ಭಾಗದ ಕೊಳೆಗೇರಿಗಳ ಕುಟುಂಬಗಳನ್ನು ಸ್ಥಳಾಂತರಿಸಲಾಗುವುದು ಎಂದು ಮಾಹಿತಿ ನೀಡಿದರು.

ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್‌, ಪ್ರಧಾನ ಎಂಜಿನಿಯರ್‌ ಬಾಲರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT