‘ಜುಲೈ 17ರಂದು ಸರ್ಕಾರಿ ಕಾಮಗಾರಿಗೆ ಅಡ್ಡಿಪಡಿಸುತ್ತಿರುವ ಸಂಬಂಧ ನಿರ್ಮಿತಿ ಕೇಂದ್ರದ ಎಂಜಿನಿಯರ್ ಒಬ್ಬರು ದೂರು ನೀಡಿದ್ದರು. ಆ ದೂರು ಆಧರಿಸಿ ರಾಮಸ್ವಾಮಿ ಕುಟುಂಬಸ್ಥರ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿತ್ತು. ರಾಮಸ್ವಾಮಿ ಅವರನ್ನು ಬಂಧಿಸಿ, ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಅಂದು ಅವರು ಸಕ್ಕರೆ ಕಾಯಿಲೆ ಹಾಗೂ ಅಧಿಕ ರಕ್ತದ ಒತ್ತಡಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ, ಅವರನ್ನು ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗಿತ್ತು. ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿ ರಾಮಸ್ವಾಮಿ ಬಿಡುಗಡೆಗೊಂಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.