ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಟ್ಟಡ ಏರಿದ್ದ ವ್ಯಕ್ತಿ ರಕ್ಷಣೆ

Published : 9 ಆಗಸ್ಟ್ 2024, 21:03 IST
Last Updated : 9 ಆಗಸ್ಟ್ 2024, 21:03 IST
ಫಾಲೋ ಮಾಡಿ
Comments

ಬೆಂಗಳೂರು: ಶೇಷಾದ್ರಿಪುರ ಕಾಲೇಜು ಹಿಂಭಾಗದಲ್ಲಿರುವ ನಿರ್ಮಾಣ ಹಂತದ ಕಟ್ಟಡದ 5ನೇ ಮಹಡಿ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸುತ್ತಿದ್ದ ವ್ಯಕ್ತಿಯನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಹಾಗೂ ಅಗ್ನಿ ಶಾಮಕದಳದ ಸಿಬ್ಬಂದಿ ಗುರುವಾರ ರಕ್ಷಿಸಿದ್ದಾರೆ. 

ದೇವನಹಳ್ಳಿ ನಿವಾಸಿ ಮಂಜುನಾಥ್(27) ಆತ್ಮಹತ್ಯೆಗೆ ಯತ್ನಿಸಿದ ಯುವಕ.

ಗುರುವಾರ ಬೆಳಿಗ್ಗೆ ಸುಮಾರು 9ರ ಸುಮಾರಿಗೆ ನಿರ್ಮಾಣ ಹಂತದ ಕಟ್ಟಡವನ್ನೇರಿದ್ದ ಮಂಜುನಾಥ್, ‘ನಾನು ಇಲ್ಲಿಂದ ಬಿದ್ದು ಸಾಯುತ್ತೇನೆ. ನನ್ನ ಪತ್ನಿ ಬಿಟ್ಟು ಹೋಗಿರುವ ದುಃಖದಲ್ಲಿದ್ದೇನೆ. ಕಟ್ಟಡದಿಂದ ಜಿಗಿಯುತ್ತೇನೆ’ ಎಂದು ಗೋಳಾಡಿದರು.

ಈ ವಿಚಾರ ತಿಳಿದು ಸ್ಥಳಕ್ಕೆ ಬಂದ ಶೇಷಾದ್ರಿಪುರ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡು ಮಂಜುನಾಥ್ ಅವರನ್ನು ಮನವೊಲಿಸಿ ಕೆಳಕ್ಕೆ ಇಳಿಸಿದರು.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್‌ಗೆ ಮದುವೆಯಾಗಿದ್ದು, ಕೌಟುಂಬಿಕ ವಿಚಾರವಾಗಿ ಪತ್ನಿ ದೂರವಾಗಿದ್ದರು. ಅದರಿಂದ ಆತ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT