ಶುಕ್ರವಾರ, ಅಕ್ಟೋಬರ್ 22, 2021
29 °C

ಪಿಇಎಸ್‌ನಲ್ಲಿ ರಕ್ತದಾನ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಗಾಂಧಿ ಜಯಂತಿ ಅಂಗವಾಗಿ ಪಿಇಎಸ್ ವಿಶ್ವವಿದ್ಯಾಲಯದ ರೋಟರಾಕ್ಟ್ ಕ್ಲಬ್ ಹಾಗೂ ರೋಟರಿ ಕ್ಲಬ್ ಬನಶಂಕರಿ ಸಹಯೋಗದಲ್ಲಿ ‘ಬೃಹತ್ ರಕ್ತದಾನ ಶಿಬಿರ’ವನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿತ್ತು.

ಶಿಬಿರವನ್ನು ರೋಟರಿ ಕ್ಲಬ್‌–ಆರ್‌ಐ 3190ನೇ ಜಿಲ್ಲಾ ಗವರ್ನರ್ ಫಜಲ್ ಮಹಮೂದ್ ಉದ್ಘಾಟಿಸಿದರು.

ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರಕ್ತದಾನ ಶಿಬಿರದಲ್ಲಿ ಸುಮಾರು 250 ಯೂನಿಟ್‌ಗಳಷ್ಟು ರಕ್ತ ಸಂಗ್ರಹಿಸಿದರು. ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣಪತ್ರ ಮತ್ತು ಟಿ-ಶರ್ಟ್ ವಿತರಿಸಲಾಯಿತು.

ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎಂ.ಆರ್‌.ದೊರೆಸ್ವಾಮಿ, ಕುಲಪತಿ ಡಾ.ಜೆ.ಸೂರ್ಯ ಪ್ರಸಾದ್, ಕುಲಸಚಿವ ಕೆ.ಎಸ್.ಶ್ರೀಧರ್, ರೋಟರಿ ಬೆಂಗಳೂರು ಬನಶಂಕರಿಯ ಅಧ್ಯಕ್ಷ ರೊಟೇರಿಯನ್ ರೋಹಿತ್ ನಾಗೇಶ್, ಕಾರ್ಯದರ್ಶಿ ರೊಟೇರಿಯನ್ ತಾರಾನಾಥ್ ಹಾಗೂ ಇತರರು ಭಾಗವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು