ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಇಎಸ್: ನೂರು ಎಂಬಿಬಿಎಸ್‌ ಸೀಟ್‌ಗೆ ಅನುಮತಿ

Published 6 ಜುಲೈ 2024, 16:26 IST
Last Updated 6 ಜುಲೈ 2024, 16:26 IST
ಅಕ್ಷರ ಗಾತ್ರ

ಬೆಂಗಳೂರು: ಪಿ.ಇ.ಎಸ್. ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್‌ನಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ 2024–25ನೇ ಸಾಲಿನಿಂದ ಎಂಬಿಬಿಎಸ್‌ ಪದವಿಯಲ್ಲಿ 100 ಸೀಟುಗಳ ಪ್ರವೇಶಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅನುಮತಿ ನೀಡಿದೆ. 

‘ಇಡೀ ಪಿಇಎಸ್ ಸಮುದಾಯಕ್ಕೆ ಇದು ಹೆಮ್ಮೆಯ ಕ್ಷಣವಾಗಿದೆ. ಮೂರು ವರ್ಷಗಳ ಅವಿರತ ಪ್ರಯತ್ನಕ್ಕೆ ಫಲ ದೊರೆತಿದೆ. ಗುಣಮಟ್ಟದ ವೈದ್ಯಕೀಯ ಶಿಕ್ಷಣ ಒದಗಿಸಲು ಈ ಕೇಂದ್ರ ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿ ಎಂ.ಆರ್. ದೊರೆಸ್ವಾಮಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT