ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಮಸಾಲಿ 2 ಎ ವಿರೋಧಿಸಿದ ಅರ್ಜಿ:ಫೆ. 3ಕ್ಕೆ ವರದಿ ಸಲ್ಲಿಕೆ

Last Updated 30 ಜನವರಿ 2023, 18:32 IST
ಅಕ್ಷರ ಗಾತ್ರ

ಬೆಂಗಳೂರು: ‘ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆಬ್ರುವರಿ 3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ಬೆಂಗಳೂರಿನ ಜ್ಞಾನಭಾರತಿಯ ಮೃತ್ಯುಂಜಯ ನಗರದ ನಿವಾಸಿ ಡಿ.ಜಿ ರಾಘವೇಂದ್ರ ಬಿನ್ ಸೂರ್ಯ ದೇವಾಡಿಗ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ‘ಆಯೋಗವು ಇತ್ತೀಚೆಗೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ಮಧ್ಯಂತರ ವರದಿಯನ್ನು ಫೆಬ್ರುವರಿ 3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಫೆಬ್ರುವರಿ 3ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT