ಬೆಂಗಳೂರು: ಯಶವಂತಪುರ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರಲ್ಲಿ ಉದ್ಯಮಿ ದಿಲೀಪ್ (35) ಎಂಬುವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.

‘ಪೆಟ್ರೋಲ್ ಬಂಕ್‌ವೊಂದರ ಮಾಲೀಕರಾಗಿದ್ದ ದಿಲೀಪ್ ಅವರ ಮೃತದೇಹ ಶುಕ್ರವಾರ ಬೆಳಿಗ್ಗೆ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಎಲ್ಲ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ಕೆಲ ದಿನಗಳ ಹಿಂದಷ್ಟೇ ಪತ್ನಿ ಜೊತೆ ದಿಲೀಪ್ ಜಗಳ ಮಾಡಿಕೊಂಡಿದ್ದರು. ನೊಂದ ಪತ್ನಿ, ಮನೆ ಬಿಟ್ಟು ಹೋಗಿದ್ದರು. ದಿಲೀಪ್ ಒಬ್ಬಂಟಿಯಾಗಿ ಮನೆಯಲ್ಲಿದ್ದರು.’

‘2–3 ದಿನಗಳ ಹಿಂದಷ್ಟೇ ದಿಲೀಪ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ತೀವ್ರ ಉಸಿರಾಟ ಸಮಸ್ಯೆ ಇತ್ತು ಎಂಬುದು ಪರಿಚಯಸ್ಥರಿಂದ ಗೊತ್ತಾಗಿದೆ. ಮನೆಯಲ್ಲಿರುವ ಬೆಡ್ ಪಕ್ಕದಲ್ಲೇ ಮೃತದೇಹ ಇತ್ತು. ಗಂಟಲಿನ ದ್ರವ ಸಂಗ್ರಹಿಸಿರುವ ವೈದ್ಯರು, ಪರೀಕ್ಷೆಗಾಗಿ ಕಳುಹಿಸಿದ್ದಾರೆ’ ಎಂದೂ ತಿಳಿಸಿದರು.

‘ಘಟನಾ ಸ್ಥಳದ ಪರಿಶೀಲನೆ ನಡೆಸಲಾಗಿದೆ. ಮೃತದೇಹವಿದ್ದ ಕೊಠಡಿಯಲ್ಲಿ ರಕ್ತದ ಕಲೆಗಳು ಇವೆ. ಹೀಗಾಗಿ, ಸಾವಿನಲ್ಲಿ ಹಲವು ಅನುಮಾನಗಳು ಇವೆ’ ಎಂದೂ ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.