ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್ ಬಂಕ್ ಸಿಬ್ಬಂದಿ ಸುಲಿಗೆ

Published 8 ಡಿಸೆಂಬರ್ 2023, 15:47 IST
Last Updated 8 ಡಿಸೆಂಬರ್ 2023, 15:47 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಹಕನ ಸೋಗಿನಲ್ಲಿ ಪೆಟ್ರೋಲ್‌ ಬಂಕ್‌ಗೆ ಬಂದಿದ್ದ ದುಷ್ಕರ್ಮಿಯೊಬ್ಬ ಸಿಬ್ಬಂದಿಯನ್ನು ಬೆದರಿಸಿ ಸುಲಿಗೆ ಮಾಡಿದ್ದು, ಈ ಸಂಬಂಧ ಮೈಕೊ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬನ್ನೇರುಘಟ್ಟ ರಸ್ತೆಯ ಪೆಟ್ರೋಲ್‌ ಬಂಕ್‌ನಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಬಂಕ್ ಸಿಬ್ಬಂದಿ ಸ್ವರಾಜ್ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದ್ವಿಚಕ್ರ ವಾಹನದಲ್ಲಿದ್ದ ಆರೋಪಿ, ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸಿಕೊಂಡಿದ್ದ. ಹಣ ನೀಡುವಂತೆ ಸಿಬ್ಬಂದಿ ಸ್ವರಾಜ್ ಕೇಳಿದ್ದರು. ಸಿಬ್ಬಂದಿಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪಿ, ಅವರ ಬಳಿ ₹ 4,500 ಕಸಿದುಕೊಂಡಿದ್ದ. ಸಿಬ್ಬಂದಿ ಕೂಗಾಡುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT