ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಕ್ ಸಿಬ್ಬಂದಿಗೆ ಮಚ್ಚು ತೋರಿಸಿ ದರೋಡೆ

Last Updated 3 ಜುಲೈ 2021, 18:58 IST
ಅಕ್ಷರ ಗಾತ್ರ

ಬೆಂಗಳೂರು: ಪೆಟ್ರೋಲ್‌ ಹಾಕಿಸಿಕೊಳ್ಳುವ ನೆಪದಲ್ಲಿ ಬೈಕ್‌ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು, ಪೆಟ್ರೋಲ್ ಬಂಕ್‌ ಸಿಬ್ಬಂದಿಗೆ ಮಚ್ಚು ತೋರಿಸಿ, ಅವರ ಬಳಿಯಿದ್ದ ಹಣ ದೋಚಿ ಪರಾರಿಯಾಗಿರುವ ಘಟನೆ ಭಾರತಿನಗರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

‘ವಿನೋದ್ ಆಟೊ ಸರ್ವೀಸ್ ಪೆಟ್ರೋಲ್ ಬಂಕ್‌ಗೆ ಶನಿವಾರ ಬೆಳಿಗ್ಗೆ ಮೂರು ಬೈಕ್‌ಗಳಲ್ಲಿ ಏಳು ಮಂದಿ ಬಂದಿದ್ದರು. ಏಕಾಏಕಿ ಮಚ್ಚು ತೋರಿಸಿ, ಅಲ್ಲಿದ್ದವರನ್ನು ಹೆದರಿಸಿದ ದುಷ್ಕರ್ಮಿಗಳು, ಬಿಲ್‌ ಕಲೆಕ್ಟರ್‌ ಬಳಿ ಇದ್ದ ₹43 ಸಾವಿರ ಕಸಿದು ಪರಾರಿಯಾಗಿದ್ದಾರೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಘಟನೆ ನಡೆದ ವೇಳೆ ಒಬ್ಬರೇ ಸಿಬ್ಬಂದಿ ಹೊರಗಿದ್ದರು. ಇಬ್ಬರು ಕಚೇರಿಯಲ್ಲಿದ್ದರು. ದುಷ್ಕರ್ಮಿಗಳು ಪರಾರಿಯಾಗುತ್ತಿದ್ದಾಗ ಸಿಬ್ಬಂದಿಕೂಗಿಕೊಂಡಿದ್ದಾರೆ. ಉಳಿದವರು ಸ್ತಳಕ್ಕೆ ಧಾವಿಸಿ ದುಷ್ಕರ್ಮಿಗಳನ್ನು ಹಿಡಿಯಲು ಯತ್ನಿಸಿದರೂ ಬೈಕ್‌ಗಳಲ್ಲಿ ತಪ್ಪಿಸಿಕೊಂಡಿದ್ದಾರೆ. ಬಂಕ್‌ನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ಘಟನೆಯ ದೃಶ್ಯಾವಳಿಗಳನ್ನು ಭಾರತಿ ನಗರ ಪೊಲೀಸರಿಗೆ ನೀಡಲಾಗಿದೆ’ ಎಂದು ಪೆಟ್ರೋಲ್‌ ಬಂಕ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT