ಕ್ರಿಮಿನಲ್ ಮೊಕದ್ದಮೆ ಹೂಡಲು ಆಗ್ರಹ
‘ಪಿಎಫ್ ಪಾವತಿಸದೆ ಕಾನೂನು ಉಲ್ಲಂಘಿಸಿ ಪೌರ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಅಡ್ಡಿಯಾಗಿರುವ ‘ಡಿಫಾಲ್ಟ್ ಗುತ್ತಿಗೆದಾರರ’ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಬೆಂಗಳೂರು ನಗರ ಸ್ವಚ್ಛತೆ ಮತ್ತು ಲಾರಿ ಮಾಲೀಕರು–ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎನ್. ಬಾಲಸುಬ್ರಮಣಿಯಂ ಆಗ್ರಹಿಸಿದರು. ‘ಡಿಫಾಲ್ಟ್ ಗುತ್ತಿಗೆದಾರರು ಸರ್ಕಾರ ಹಾಗೂ ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಪೌರಕಾರ್ಮಿಕರಿಗೆ ವಂಚಿಸಲಾಗಿದೆ. ಈ ಬಗ್ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಿಬಿಎ ಮುಖ್ಯ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅವರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕಾನೂನಾತ್ಮಕವಾಗಿಯೇ ಹೋರಾಟ ನಡೆಸಲಾಗುತ್ತದೆ’ ಎಂದರು.