ಭಾನುವಾರ, ಡಿಸೆಂಬರ್ 4, 2022
19 °C

ಪಿಎಫ್ಐ ನಿಷೇಧ ಸ್ವಾಗತಾರ್ಹ: ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಸಮಾಜ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಪಿಎಫ್ಐ ಮತ್ತು ಅದರ 8 ಅಂಗಸಂಸ್ಥೆಗಳನ್ನು 5 ವರ್ಷಗಳ ಮಟ್ಟಿಗೆ ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಇಡೀ ದೇಶವೇ ಸ್ವಾಗತಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ ಎನ್. ಅಶ್ವತ್ಥನಾರಾಯಣ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಘಟನೆಯು ಬೇರೆ ಯಾವುದೇ ರೂಪದಲ್ಲಿ ತಲೆ ಎತ್ತದಂತೆ ತೀವ್ರ ನಿಗಾ ವಹಿಸಲಾಗುವುದು ಎಂದರು.

ಪಿಎಫ್ಐ ಸಂಘಟನೆಯು ವಿದೇಶಿ ಜಾಲಗಳ ಮೂಲಕ ಅಕ್ರಮ ನೆರವು ಪಡೆದುಕೊಳ್ಳುತ್ತಿತ್ತು. ಈ ಮೂಲಕ ದೇಶದಲ್ಲಿ ಧಾರ್ಮಿಕ ಸಂಘರ್ಷ ಉಂಟುಮಾಡಲು ಅದು ಸಂಚು ರೂಪಿಸುತ್ತಿತ್ತು ಎಂದು ಅವರು ದೂರಿದರು‌

ಕೇಂದ್ರ ಸರ್ಕಾರವು ಪಿಎಫ್ ಐ ಸಂಘಟನೆಯ  ವಿಧ್ವಂಸಕ ಚಟುವಟಿಕೆಗಳು ಹಾಗೂ ಅನುಮಾನಾಸ್ಪದ ಹಣಕಾಸು ವ್ಯವಹಾರಗಳ ಮೇಲೆ ಹದ್ದಿನ ಕಣ್ಣಿಟ್ಟಿತ್ತು. ಇದರ ಬೆನ್ನಲ್ಲೇ ಎರಡು ದಿನದ  ಹಿಂದೆ ದೇಶದಾದ್ಯಂತ ಆ ಸಂಘಟನೆಯ ಕಚೇರಿಗಳು ಮತ್ತು ನಾಯಕರ ಮೇಲೆ  ಎನ್ಐಎ ದಾಳಿ ನಡೆಸಲಾಗಿತ್ತು ಎಂದು ಹೇಳಿದರು.

ಸಮಾಜ ಮತ್ತು ದೇಶದ ಹಿತಕ್ಕೆ ವಿರುದ್ಧವಾಗಿ ವರ್ತಿಸುವ ಯಾವ ಸಂಘಟನೆಗಳನ್ನು ಕೂಡ ಬಿಡುವುದಿಲ್ಲ. ಕೇಂದ್ರ ಸರ್ಕಾರದ ದಾಳಿಯ ಬೆನ್ನಲ್ಲೇ ರಾಜ್ಯ ಪೊಲೀಸರು ಕೂಡ ಮಂಗಳವಾರ 15ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದರು ಎಂದು ಅವರು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು