ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣ ಮತ್ತು ರಾಮನಗರ ಸ್ನಾತಕೋತ್ತರ ಕೇಂದ್ರ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ವಿವಿಧ 2020–21ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಜ್ಞಾನ ಭಾರತಿ ಆವರಣದಲ್ಲಿ ಕಲಾ, ವಿಜ್ಞಾನ, ವಾಣಿಜ್ಯ ಹಾಗೂ ಶಿಕ್ಷಣ ನಿಕಾಯ ಕೋರ್ಸ್‌ಗಳು ಹಾಗೂ ಪಿಜಿ ಡಿಪ್ಲೊಮಾ ಕೋರ್ಸ್, ಸರ್ಟಿಫಿಕೇಟ್ ಕೋರ್ಸ್ ಪ್ರವೇಶಕ್ಕೆ, ರಾಮನಗರ ಸ್ನಾತಕೋತ್ತರ ಕೇಂದ್ರದಲ್ಲಿ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಿಶ್ವವಿದ್ಯಾಲಯದಿಂದ ಸಂಯೋಜನೆಗೋಂಡ 54 ಸ್ನಾತಕೋತ್ತರ ಪದವಿ ಕಾಲೇಜುಗಳಲ್ಲಿ ಬೋಧಿಸುವ ವಿಷಯಗಳ ಬಗ್ಗೆ, ಅರ್ಜಿ ನಮೂನೆ, ಅರ್ಹತೆ, ಸೀಟ್ ಮ್ಯಾಟ್ರಿಕ್ಸ್ ಬಗ್ಗೆ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ www.bangaloreuniversity.ac.in ನೋಡಬಹುದು. ದಂಡ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನ.21. ₹200 ದಂಡದೊಂದಿಗೆ ನ.30ರೊಳಗೆ ಅರ್ಜಿ ಹಾಕಬಹುದು. ಅಂತಿಮ ಜೇಷ್ಠತಾ ಪಟ್ಟಿಯನ್ನು ಡಿ.9ಕ್ಕೆ ಪ್ರಕಟಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.