ಶನಿವಾರ, ಮೇ 21, 2022
23 °C

ಸರ್ಕಾರಿ ಸೇವಾನಿರತ ವೈದ್ಯರ ಕೃಪಾಂಕ: ಅಧಿಸೂಚನೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸರ್ಕಾರಿ ಸೇವಾನಿರತ ವೈದ್ಯರು 2019–20ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕೋತ್ತರ ವೈದ್ಯಕೀಯ ಡಿಪ್ಲೊಮಾ ಶಿಕ್ಷಣಕ್ಕೆ ಪ್ರವೇಶ ಪಡೆಯುವ ನಿಟ್ಟಿನಲ್ಲಿ, ಕೃಪಾಂಕ ನೀಡಲು ಮಾನದಂಡಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಕಲಬುರಗಿಯ ಡಾ. ಪ್ರೀತಿ ಜಿ. ರಾಥೋಡ್, ಹಾಸನದ ಡಾ.ಆರ್.ಮಧು ಹಾಗೂ ಶಿರೂರಿನ ಡಾ.ನೀಲಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.ರಾಜ್ಯ ಸರ್ಕಾರ 2019ರ ಮಾರ್ಚ್‌ 8  ಹೊರಡಿಸಿರುವ ಅಧಿಸೂಚನೆ ಭಾರತೀಯ ವೈದ್ಯಕೀಯ ಮಂಡಳಿ
ಯ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ನಿಯಮಗಳು-2000ರ ಕಲಂ 9 (4)ಕ್ಕೆ ವಿರುದ್ಧವಾಗಿದೆ ಎಂಬ ಅಭಿಪ್ರಾಯದೊಂದಿಗೆ ಅಧಿಸೂಚನೆ ರದ್ದುಪಡಿಸಿ ಆದೇಶಿಸಿತು.‌

ಅರ್ಜಿದಾರರ ಪರ ವಕೀಲೆ ಅಕ್ಕಮಹಾದೇವಿ ಹಿರೇಮಠ ವಾದ ಮಂಡಿಸಿದ್ದರು. ರಾಜೀವಗಾಂಧಿ ಆರೋಗ್ಯ ವಿವಿ ಮತ್ತು ಭಾರತೀಯ ವೈದ್ಯಕೀಯ ಮಂಡಳಿ ಅರ್ಜಿದಾರರ ವಾದವನ್ನು ಬೆಂಬಲಿಸಿದ್ದವು. ಅರ್ಜಿಗೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿರೋಧ ವ್ಯಕ್ತಪಡಿಸಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು