ಗುರುವಾರ , ಜೂನ್ 17, 2021
27 °C

ಲಸಿಕೆ ಮಾರಾಟ: ವೈದ್ಯೆ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಮಂಜುನಾಥ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಗುತ್ತಿಗೆ ಆಧಾರದಲ್ಲಿ ವೈದ್ಯರಾಗಿದ್ದ ಡಾ. ಎಂ.ಕೆ ಪುಷ್ಪಿತಾ ಅವರನ್ನು ವಜಾ ಮಾಡಲಾಗಿದೆ.

ಈ ಕೇಂದ್ರದಲ್ಲಿ ಲಸಿಕೆ ಮಾರಾಟ ಮಾಡುತ್ತಿದ್ದ ವೇಳೆ ಪುಷ್ಪಿತಾ ಸಾಕ್ಷಿಸಮೇತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಅವರನ್ನು ನೇಮಿಸಿಕೊಳ್ಳಲಾಗಿತ್ತು. ಲಸಿಕೆ ಮಾರಟದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೇವೆಯಿಂದ ಅವರನ್ನು ಬಿಡುಗಡೆಗೊಳಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು