ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿಶ್ವವಿದ್ಯಾಲಯ: ಪಿಎಚ್‌.ಡಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ಇಂದು

Last Updated 14 ಮಾರ್ಚ್ 2021, 17:06 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಾವಳಿ ಗಾಳಿಗೆ ತೂರಿ ಪಿಎಚ್‌.ಡಿ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತಿದೆ. ಇದಕ್ಕೆ ವಿಶ್ವವಿದ್ಯಾಲಯದ ಕುಲಪತಿಯವರ ನಿರ್ಲಕ್ಷ್ಯ ಧೋರಣೆಯೇ ಕಾರಣ’ ಎಂದು ಆರೋಪಿಸಿ ಸಂಶೋಧನಾ ವಿದ್ಯಾರ್ಥಿಗಳು ಸೋಮವಾರ (ಮಾ.15) ಪ್ರತಿಭಟನೆ ನಡೆಸಲಿದ್ದಾರೆ.

‘ಯುಜಿಸಿ ನಿಯಮಾವಳಿಗಳ ಪ್ರಕಾರ ಪ್ರತಿ ಪ್ರವೇಶ ಪ್ರಕ್ರಿಯೆಯಲ್ಲಿ ಸಾಮಾನ್ಯ ವರ್ಗಕ್ಕೆ ಶೇ 55, ಹಿಂದುಳಿದ ವರ್ಗಗಳಿಗೆ ಶೇ 50 ಮತ್ತು ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಶೇ 45ರಷ್ಟು ಅರ್ಹತಾ ಅಂಕಗಳನ್ನು ನಿಗದಿಪಡಿಸಬೇಕು. ಆದರೆ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಈ ಯಾವುದೇ ವಿನಾಯಿತಿ ನೀಡದೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತಿದೆ’ ಎಂದು ವಿದ್ಯಾರ್ಥಿಯೊಬ್ಬರು ದೂರಿದರು.

‘ನಿವೃತ್ತಿಗೆ 6 ತಿಂಗಳು ಬಾಕಿ ಇರುವ ಪ್ರಾಧ್ಯಾಪಕರಿಗೆ ಪಿಎಚ್‌.ಡಿ ಮಾರ್ಗದರ್ಶನ ನೀಡಲು ಪ್ರೊ. ಕೆ.ಆರ್. ವೇಣುಗೋಪಾಲ್ ಅವರು ಅವಕಾಶ ನಿರಾಕರಿಸುತ್ತಿದ್ದಾರೆ. ಇದರಿಂದ 80ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪಿಎಚ್‌.ಡಿ ಕನಸು ಮಣ್ಣುಪಾಲಾಗಿದೆ’ ಎಂದು ಮತ್ತೊಬ್ಬ ವಿದ್ಯಾರ್ಥಿ ಹೇಳಿದರು.

‘11 ಗಂಟೆಯಿಂದ ಪ್ರತಿಭಟನೆ ಪ್ರಾರಂಭಿಸುತ್ತೇವೆ. ವಿಶ್ವವಿದ್ಯಾಲಯದ ಎಲ್ಲ ವಿಭಾಗದ ಬಾಗಿಲುಗಳಿಗೆ ಬೀಗ ಜಡಿಯಲಾಗುವುದು. ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT