ಸೋಮವಾರ, ಆಗಸ್ಟ್ 10, 2020
21 °C

ಅಶ್ಲೀಲ ಫೋಟೊ ಸೃಷ್ಟಿಸಿ ಬ್ಲ್ಯಾಕ್‌ಮೇಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ನಿವಾಸಿಯೊಬ್ಬರ ಫೋಟೊ ಬಳಸಿಕೊಂಡು ಅಶ್ಲೀಲ ರೀತಿಯಲ್ಲಿ ಫೋಟೊ ಸೃಷ್ಟಿಸಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದ್ದು, ಈ ಸಂಬಂಧ ಉತ್ತರ ವಿಭಾಗದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಖಾಸಗಿ ಕಂಪನಿ ಉದ್ಯೋಗಿ 34 ವರ್ಷದ ಪುರುಷ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದೂರುದಾರರು ಫೇಸ್‌ಬುಕ್‌ನಲ್ಲಿ ಖಾತೆ ಹೊಂದಿದ್ದಾರೆ. ಜೂನ್ 25ರಂದು ಅವರಿಗೆ ಕರೆ ಮಾಡಿದ್ದ ಅಪರಿಚಿತನೊಬ್ಬ, ‘ನಿಮ್ಮ ಫೇಸ್‌ಬುಕ್‌ ಖಾತೆ ಹ್ಯಾಕ್ ಮಾಡಲಾಗಿದೆ. ನಿಮ್ಮ ಫೋಟೊವನ್ನು ಅಶ್ಲೀಲ ರೀತಿಯಲ್ಲಿ ಸೃಷ್ಟಿಸಿ ಫೇಸ್‌ಬುಕ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುತ್ತೇನೆ. ಈ ರೀತಿ ಮಾಡಬಾರದೆಂದರೆ ₹80 ಸಾವಿರ ನೀಡಬೇಕು’ ಎಂದು ಬೇಡಿಕೆ ಇಟ್ಟಿದ್ದ.’

‘ಬ್ಲ್ಯಾಕ್‌ಮೇಲ್‌ನಿಂದ ನೊಂದ ದೂರುದಾರ, ತಮಗೆ ಕರೆ ಮಾಡಲು ಆರೋಪಿ ಬಳಸಿದ್ದ ಮೊಬೈಲ್‌ ನಂಬರ್ ಸಹಿತವಾಗಿ ದೂರು ನೀಡಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.