ಆಗಸ್ಟ್ 10ರಂದು ಮಧ್ಯಾಹ್ನ 3ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಡಾ. ಅಜಿತ್ ಹುಯಿಲಗೋಳ ಅವರು ವಿಶ್ವದ ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ತೆಗೆದಿರುವ ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ. ಆಗಸ್ಟ್ 11ರಂದು ಆಹಾರ ಛಾಯಾಚಿತ್ರ ಸ್ಪರ್ಧೆ ನಡೆಯಲಿದ್ದು, ವಿವಿಧ ಆಹಾರ ಪದಾರ್ಥಗಳ ಛಾಯಾಚಿತ್ರಗಳನ್ನು ತೆಗೆದು ಆಯೋಜಕರೊಂದಿಗೆ ಹಂಚಿಕೊಳ್ಳಬೇಕು. ಉತ್ತಮ ಛಾಯಾಚಿತ್ರಗಳಿಗೆ ಬಹುಮಾನಗಳನ್ನು ನೀಡಲಾಗುವುದು. ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 6ರವರೆಗೆ ಛಾಯಾಚಿತ್ರಗಳ ಪ್ರದರ್ಶನ ಇರಲಿದೆ. ಈ ಪ್ರದರ್ಶನ ಹಾಗೂ ಸ್ಪರ್ಧೆ ಉಚಿತವಾಗಿದ್ದು, ಎಲ್ಲರೂ ಭಾವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.