ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಕ್ಕೆ ಒತ್ತಾಯ

Last Updated 20 ಮೇ 2019, 18:56 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಗ್ರೇಡ್‌–2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜೆ.ಕೆ. ಲೋಕೇಶಪ್ಪ, ‘2007 ರಿಂದಲೇ ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಣವನ್ನು ಸರ್ಕಾರ ಕಡ್ಡಾಯಗೊಳಿಸಿದೆ. 6ನೇ ತರಗತಿಯಿಂದ 8ನೇ ತರಗತಿವರೆಗೆ 100 ಅಂಕಗಳ ಪಠ್ಯವೂ ಇದೆ. ಆದ್ದರಿಂದ ಎಲ್ಲಾ ಶಾಲೆಯಲ್ಲೂ ದೈಹಿಕ ಶಿಕ್ಷಣ ಶಿಕ್ಷಕರ ಅವಶ್ಯಕತೆ ಇದೆ’ ಎಂದರು.

‘ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರನ್ನು ಡಾ.ಎಲ್‌.ಆರ್‌. ವೈದ್ಯನಾಥನ್‌ ವರದಿಯಂತೆ ಕಡ್ಡಾಯಗೊಳಿಸಬೇಕು. ‌ನಿವೃತ್ತಿ ಅಂಚಿನಲ್ಲಿರುವ ಶಿಕ್ಷಕರಿಗೆ ವರ್ಗಾವಣೆ ಮಾಡಬಾರದು, ಬಿ.ಪಿ.ಇಡಿ ತರಬೇತಿ ಪಡೆದುಪ್ರಾಥಮಿಕ ಶಾಲೆಗಳಲ್ಲೇ ಕಾರ್ಯನಿರ್ವಹಿಸುತ್ತಿರುವವರಿಗೆ ಬಡ್ತಿ ನೀಡಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT