ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಪಿಆರ್‌ ಪ್ರಶ್ನಿಸಿ ಪಿಐಎಲ್‌

Last Updated 3 ಫೆಬ್ರುವರಿ 2020, 20:12 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತಂತೆ ‘ಪೀಪಲ್ಸ್ ಯೂನಿಯನ್‌ ಪಾರ್‌ ಸಿವಿಲ್‌ ಲಿಬರ್ಟೀಸ್’ ಸಲ್ಲಿಸಿರುವ ಅರ್ಜಿಯು ಸೋಮವಾರ, ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತು.

ಅರ್ಜಿ ಪರಿಶೀಲಿಸಿದ ನ್ಯಾಯಪೀಠವು, ‘ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ಏನಾದರೂ ವಿಚಾರಣಾ ಹಂತದಲ್ಲಿ ಇದ್ದರೆ, ನಾವಿಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಲು ಬರುವುದಿಲ್ಲ. ಆದ್ದರಿಂದ, ಸುಪ್ರೀಂಕೋರ್ಟ್‌ನಲ್ಲಿರುವ ಅರ್ಜಿಯ ಬಗ್ಗೆ ಮಾಹಿತಿ ಒದಗಿಸಿ’ ಎಂದು ಸರ್ಕಾರದ ಪರ ವಕೀಲರು ಹಾಗೂ ಅರ್ಜಿದಾರರಿಗೆ ಸೂಚಿಸಿ ವಿಚಾರಣೆಯನ್ನು ಮಾರ್ಚ್‌ 30ಕ್ಕೆ ಮುಂದೂಡಿದೆ.

ಆಕ್ಷೇಪಣೆ ಏನು?: ‘ಕೇಂದ್ರ ಸರ್ಕಾರದ ಅಧಿಸೂಚನೆ ಆಧರಿಸಿ ಕರ್ನಾಟಕ ಗಣತಿ ನಿರ್ದೇಶಕರು 2019ರ ಅಕ್ಟೋಬರ್ 9ರಂದು ಹೊರಡಿಸಿರುವ ಸುತ್ತೋಲೆ ರದ್ದುಪಡಿಸಬೇಕು. ಇದು ಸಂವಿಧಾನದ 14, 19 ಹಾಗೂ 21ನೇ ವಿಧಿಗಳಿಗೆ ವಿರುದ್ಧವಾಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT