ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ ಪಿಲ್ಲರ್ ಚೌಕಟ್ಟು ಕುಸಿತ: ಎಂಜಿನಿಯರ್‌ ವಿಚಾರಣೆ?

Last Updated 3 ಫೆಬ್ರುವರಿ 2023, 3:16 IST
ಅಕ್ಷರ ಗಾತ್ರ

ಬೆಂಗಳೂರು: ಮೆಟ್ರೊ ಪಿಲ್ಲರ್ ಕಬ್ಬಿಣದ ಚೌಕಟ್ಟು ಉರುಳಿಬಿದ್ದಿದ್ದ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದ ಹೈದರಾಬಾದ್‌ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ತಜ್ಞರು, ‘ಘಟನೆಗೆ ಕಾರಣವೇನು?’ ಎಂಬುದರ ಬಗ್ಗೆ ಗೋವಿಂದಪುರ ಠಾಣೆ ಪೊಲೀಸರಿಗೆ ವರದಿ ಸಲ್ಲಿಸಿದ್ದಾರೆ.

ಹೆಣ್ಣೂರು ಕ್ರಾಸ್ ಬಳಿ ಜ. 10ರಂದು ಸಂಭವಿಸಿದ್ದ ಅವಘಡದಲ್ಲಿ ತೇಜಸ್ವಿನಿ ಸುಲಾಖೆ (28) ಹಾಗೂ ಎರಡೂವರೆ ವರ್ಷದ ಮಗು ವಿಹಾನ್ ಮೃತಪಟ್ಟಿದ್ದರು. ಮೆಟ್ರೊ ನಿರ್ಮಾಣ ಗುತ್ತಿಗೆದಾರರು ಹಾಗೂ ಬಿಎಂಆರ್‌ಸಿಎಲ್ ಎಂಜಿನಿಯರ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಜ.13ರಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಐಐಟಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಎಸ್. ಸುರಿಯಾ ಪ್ರಕಾಶ್ ಹಾಗೂ ಪ್ರಾಧ್ಯಾಪಕ ಡಾ. ಸುಬ್ರಮಣಿಯಂ ನೇತೃತ್ವದ ತಂಡ ಪರಿಶೀಲನಾ ವರದಿ ಸಲ್ಲಿಸಿದೆ.

‘ಕಬ್ಬಿಣದ ಚೌಕಟ್ಟಿಗೆ ಆಸರೆ ಇಲ್ಲದಿದ್ದರಿಂದ ಅವಘಡ ಸಂಭವಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘12 ಅಡಿಗಿಂತ ಹೆಚ್ಚು ಹಾಗೂ 12 ಮೀಟರ್ ಎತ್ತರದ ಫಿಲ್ಲರ್‌ಗಳನ್ನು ಹೇಗೆ ನಿರ್ಮಿಸಬೇಕು ? ಯಾವ ಹಂತಗಳನ್ನು ಪಾಲಿಸಬೇಕು ಎಂಬ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಅಂಶಗಳು ಪಾಲನೆಯಾಗಿವೆಯಾ? ಎಂಬ ಬಗ್ಗೆ ತನಿಖೆ ನಡೆದಿದೆ. ಗುತ್ತಿಗೆದಾರರು, ಬಿಎಂಆರ್‌ಸಿಎಲ್‌ ಎಂಜಿನಿಯರ್‌ಗಳ ನಿರ್ಲಕ್ಷ್ಯ ಕಾಣುತ್ತಿದೆ’ ಎಂದು ಮೂಲಗಳು ತಿಳಿಸಿವೆ.

‘ಗುತ್ತಿಗೆದಾರರು ಹಾಗೂ ಬಿಎಂಆರ್‌ ಸಿಎಲ್‌ ಎಂಜಿನಿಯರ್‌ಗಳನ್ನು ಈಗಾಗಲೇ ಒಂದು ಬಾರಿ ವಿಚಾರಣೆ ಮಾಡಲಾಗಿದೆ. ಐಐಟಿ ತಜ್ಞರ ವರದಿ ಆಧರಿಸಿ ಮತ್ತಷ್ಟು ಪ್ರಶ್ನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಸದ್ಯದಲ್ಲೇ ಎಂಜಿನಿಯರ್‌ಗಳನ್ನು ಪುನಃ ವಿಚಾರಣೆಗೆ ಕರೆಯಲಾಗುವುದು’ ಎಂದು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT