ಶನಿವಾರ, ಮಾರ್ಚ್ 28, 2020
19 °C

‘ಮಾಯಾ ಬಜಾರ್’ ಸಿನಿಮಾಕ್ಕೆ ಪೈರಸಿ ಕಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪವರ್‌ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿರ್ಮಿಸಿರುವ ‘ಮಾಯಾ ಬಜಾರ್’ ಸಿನಿಮಾವನ್ನು ಕೃತಿಚೌರ್ಯ ಮಾಡಿ ‘ಕನ್ನಡ ರಾಕರ್ಸ್‌’ ಹೆಸರಿನ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ಈ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಪೈರಸಿ ಸಂಬಂಧ ಸ್ವಾಮಿ ಎಂಬುವರು ದೂರು ನೀಡಿದ್ದಾರೆ. ‘ಕನ್ನಡ ರಾಕರ್ಸ್‌’ ಜಾಲತಾಣದ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಪುನೀತ್‌ ರಾಜ್‌ಕುಮಾರ್ ಅವರ ‘ಪಿಆರ್‌ಕೆ ಪ್ರೊಡಕ್ಷನ್’ ನಿರ್ಮಿಸಿರುವ ‘ಮಾಯಾ ಬಜಾರ್’ ಸಿನಿಮಾ, ಫೆ. 28ರಂದು ರಾಜ್ಯದಾದ್ಯಂತ ಬಿಡುಗಡೆ ಆಗಿದೆ. ಅಂದು ರಾತ್ರಿಯೇ ಪೂರ್ತಿ ಸಿನಿಮಾವನ್ನು ಪೈರಸಿ ಮಾಡಿ ಜಾಲತಾಣ ಹಾಗೂ ಟೆಲಿಗ್ರಾಮ್‌ ಆ್ಯಪ್‌ನಲ್ಲಿ ಹರಿಯಬಿಡಲಾಗಿದೆ. ಆರೋಪಿಗಳನ್ನು ಪತ್ತೆ ಮಾಡಿ’ ಎಂದು ದೂರಿನಲ್ಲಿ ಸ್ವಾಮಿ ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು