ಮಂಗಳವಾರ, ಅಕ್ಟೋಬರ್ 20, 2020
22 °C
ಆನಂದ ಪಿರಮಲ್‌ ಜತೆ ಮುಖ್ಯಮಂತ್ರಿ ವರ್ಚುವಲ್ ಸಭೆ

ಹೂಡಿಕೆಗೆ ಪಿರಮಲ್‌ ಸಮೂಹ ಆಸಕ್ತಿ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಔಷಧಿ ಉತ್ಪಾದನಾ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್‌ ಸಮೂಹ ಆಸಕ್ತಿ ವ್ಯಕ್ತಪಡಿಸಿದೆ. ಉದ್ಯಮ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಪಿರಮಲ್‌ ಸಮೂಹಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಪಿರಮಲ್‌ ಸಮೂಹದ ಅಧ್ಯಕ್ಷ ಆನಂದ್‌ ಪಿರಮಲ್‌ ಅವರೊಂದಿಗೆ ಮುಖ್ಯಮಂತ್ರಿ ಮಂಗಳವಾರ ವರ್ಚು ವಲ್‌ ಸಭೆ ನಡೆಸಿದರು. ರಾಜ್ಯದಲ್ಲಿ ಜಾರಿಗೊಳಿಸಿರುವ ಹೊಸ ಕೈಗಾರಿಕಾ ನೀತಿಯ ಕುರಿತು ವಿವರಿಸಿದ ಮುಖ್ಯಮಂತ್ರಿ, ಬೆಂಗಳೂರು ಮಾತ್ರವಲ್ಲದೇ ಬೇರೆ ಜಿಲ್ಲೆಗಳಲ್ಲೂ ಉದ್ಯಮ ಸ್ಥಾಪನೆಗೆ ಪ್ರೋತ್ಸಾಹ ನೀಡುವುದಾಗಿ ತಿಳಿಸಿದರು.

‘ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಒಂದೇ ದಿನದಲ್ಲಿ ಎಲ್ಲ ಅನುಮತಿಗಳನ್ನೂ ನೀಡಲಾಗುವುದು ಎಂಬ ವಿಚಾರ ತಿಳಿದು ನಾವು ಹೂಡಿಕೆಗೆ ಉತ್ಸುಕರಾಗಿದ್ದೇವೆ’ ಎಂದು ಆನಂದ್‌ ಪಿರಮಲ್‌ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು