ಬೆಂಗಳೂರು: ‘ನಗರದ ಚಿತ್ರಣವನ್ನು ಆಮೂಲಾಗ್ರವಾಗಿ ಬದಲಾವಣೆ ಮಾಡಲು ಯೋಜನೆ ರೂಪಿಸಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ನಿಂದ ಮೃತಪಟ್ಟ ವಾರಸುದಾರರ ಕುಟುಂಬದವರಿಗೆ ಬಿಬಿಎಂಪಿ ಮತ್ತು ಬೆಂಗಳೂರು ನಗರ ಜಿಲ್ಲಾಡಳಿತ ವತಿಯಿಂದ ಪರಿಹಾರ ಧನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಗರವನ್ನು ಯೋಜನಾಬದ್ಧವಾಗಿ ಬೆಳೆಸಬೇಕಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಬಿಬಿಎಂಪಿ, ಜಲಮಂಡಳಿ ಸೇರಿ ಎಲ್ಲ ಸಾರ್ವಜನಿಕ ಸಂಸ್ಥೆಗಳು ಪರಸ್ಪರ ಸಮನ್ವಯದಿಂದ ಕೆಲಸ ನಿರ್ವಹಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿಗೆ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಸಹಕರಿಸಬೇಕು’ ಎಂದರು.

‘ಮಳೆ ಬಂದು ಪ್ರವಾಹ ಉಂಟಾದ ಸ್ಥಳಗಳಿಗೆ ನಾನೇ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಅಗತ್ಯ ಇರುವೆಡೆ ರಾಜಕಾಲುವೆ ನಿರ್ಮಾಣಕ್ಕೆ ಸಮಗ್ರ ಯೋಜನೆ ರೂಪಿಸಲು ಸೂಚನೆ ನೀಡಿದ್ದೇನೆ. ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿದ್ದರೆ ಗುರುತಿಸಲು ತಿಳಿಸಿದ್ದೇನೆ. ಅವುಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘ಕೋವಿಡ್ನಿಂದ ಮನೆಯ ಸದಸ್ಯರನ್ನು ಕಳೆದುಕೊಂಡ ಬಿಪಿಎಲ್ ಕುಟುಂಬಗಳಿಗೆ ತಲಾ ₹1 ಲಕ್ಷ ಪರಿಹಾರ ನೀಡಲು ₹300 ಕೋಟಿ ಬಿಡುಗಡೆ ಮಾಡಿದ್ದೇನೆ. ಸಾಂಕೇತಿಕವಾಗಿ ಕೆಲವರಿಗೆ ಇಲ್ಲಿ ವಿತರಿಸಲಾಗಿದ್ದು, ಉಳಿದ ಕುಟುಂಬಳಿಗೆ 8ರಿಂದ 10 ದಿನಗಳಲ್ಲಿ ವಿತರಣೆ ಮಾಡಲಾಗುವುದು’ ಎಂದರು.

‘ಬಿಪಿಎಲ್ ಮಾತ್ರವಲ್ಲದೇ ಎಪಿಎಲ್ ಕುಟುಂಬಕ್ಕೂ ಕೇಂದ್ರ ಸರ್ಕಾರದಿಂದ ತಲಾ ₹50 ಸಾವಿರ ಪರಿಹಾರ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬಕ್ಕೆ ಮಾತ್ರ ₹1 ಲಕ್ಷ ಸೇರಿಸಿ ಒಟ್ಟು ₹1.50 ಲಕ್ಷ ಕೊಡುತ್ತಿದೆ. ಈ ಒಂದು ಲಕ್ಷವನ್ನು ಎಪಿಎಲ್ ಕುಟುಂಬಕ್ಕೂ ನೀಡಬೇಕು’ ಎಂದು ಶಾಸಕ ಬಿ.ಝಡ್. ಜಮೀರ್ ಅಹಮ್ಮದ್ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

‘ಕೋವಿಡ್ ಲಸಿಕೆ ಪ್ರಮಾಣ ಹೆಚ್ಚಿಸುವಲ್ಲಿ ಯಶಸ್ವಿಯಾಗಿದ್ದೇವೆ. ಶೇ 97ರಷ್ಟು ಜನರಿಗೆ ಮೊದಲ ಡೋಸ್ ಮತ್ತು ಶೇ 76ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಗ್ರಾಮೀಣ ಪ್ರದೇಶ ಮತ್ತು ಕೆಲ ಸಮುದಾಯದಲ್ಲಿ ಲಸಿಕೆ ಬಗ್ಗೆ ತಿಳಿವಳಿಕೆ ಕಡಿಮೆ ಇದೆ. ಅವರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಈ ಕಾರ್ಯಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಸಹಕಾರ ಬೇಕು’ ಎಂದು ಹೇಳಿದರು.

‘ವೈದ್ಯಕೀಯ ಮೂಲಸೌಕರ್ಯ ಹೆಚ್ಚಿಸುವ ಕೆಲಸ ನಿರಂತರವಾಗಿ ನಡೆದಿದೆ. ಬೆಂಗಳೂರು ನಗರ ಮತ್ತು ಪ್ರತಿ ಜಿಲ್ಲಾ ಕೇಂದ್ರಗಳು ಸೇರಿ 100ಕ್ಕೂ ಹೆಚ್ಚು ಆರ್ಟಿಪಿಸಿಆರ್ ಪರೀಕ್ಷೆ ನಡೆಸುವ ಘಟಕಗಳನ್ನು ನಿರ್ಮಿಸಲಾಗಿದೆ. ಮೂರನೇ ಅಲೆ ಬಂದರೆ ಎದುರಿಸಲು ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಂಡಿದ್ದೇವೆ’ ಎಂದು ವಿವರಿಸಿದರು.

ಮನೆ ಬಾಗಿಲಿಗೆ ಕಂದಾಯ ದಾಖಲೆ: ಆರ್.ಅಶೋಕ

‘ರೈತರು ತಮ್ಮ ಜಮೀನಿನ ಪಹಣಿ ಮತ್ತು ನಕ್ಷೆಗಾಗಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ಈ ಎಲ್ಲ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸಲಾ
ಗುತ್ತಿದೆ’ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.

‘ರಾಜ್ಯದಲ್ಲಿ 45 ಲಕ್ಷ ರೈತರಿದ್ದು, ಅವರಲ್ಲಿ ಕೆಲವರು ತಮ್ಮ ಜಮೀನಿನ ಪಹಣಿ ಮತ್ತು ನಕ್ಷೆಯನ್ನೇ ನೋಡಿಲ್ಲ. ಯಾವುದೇ ಖರ್ಚಿಲ್ಲದೇ, ಅರ್ಜಿ ಪಡೆಯದೇ ಈ ದಾಖಲೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. 60 ವರ್ಷ ದಾಟಿದ ರಾಜ್ಯದ ಎಲ್ಲರ ಮಾಹಿತಿ ಸರ್ಕಾರದ ಬಳಿ ಇದೆ. ಅವರಿಂದ ಕೂಡ ಅರ್ಜಿ ಪಡೆಯದೆ ಮಾಸಾಶನ ಮಂಜೂರು ಮಾಡಲಾಗುವುದು’ ಎಂದರು.

’ಕೋವಿಡ್ ಪರಿಹಾರ ವಿತರಣೆಗೆ ₹400 ಕೋಟಿ ಮೀಸಲಿರಿಸಲಾಗಿದೆ. 11,982 ಬಿಪಿಎಲ್ ಕುಟುಂಬಗಳಿಗೆ ಚೆಕ್ ವಿತರಿಸುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರದ ಪರಿಹಾರ ಯೊಜನೆಯಡಿ 22,879 ಕುಟುಂಬಗಳಿಗೆ ನೇರವಾಗಿ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ 2,601 ಕುಟುಂಬಗಳಿಗೆ ಈವರೆಗೆ ₹1 ಲಕ್ಷ ವಿತರಣೆಯಾಗಿದೆ. ಕೇಂದ್ರದ ಪರಿಹಾರ ಯೋಜನೆಯಡಿ 7,262 ಕುಟುಂಬಕ್ಕೆ ₹50 ಸಾವಿರ ನೇರ ವರ್ಗಾವಣೆ ಮಾಡಲಾಗಿದೆ’ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.