ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: 5 ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ದರ ಹೆಚ್ಚಳ

Last Updated 30 ಸೆಪ್ಟೆಂಬರ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಐದು ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ತಾತ್ಕಾಲಿಕವಾಗಿ ಹೆಚ್ಚಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ, ಕಂಟೋನ್ಮೆಂಟ್, ಯಶವಂತಪುರ, ಕೃಷ್ಣರಾಜಪುರ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ರೈಲು ನಿಲ್ದಾಣಗಳಲ್ಲಿ ₹10 ಇದ್ದ ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ₹20ಕ್ಕೆ ಹೆಚ್ಚಿಸಲಾಗಿದೆ. ದಸರಾ ಹಬ್ಬದ ರಜೆ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾದರೆ ಪ್ರಯಾಣಿಕರ ಓಡಾಟಕ್ಕೆ ಕಷ್ಟವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ತಾತ್ಕಾಲಿಕವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT