ಗುರುವಾರ , ಡಿಸೆಂಬರ್ 1, 2022
25 °C

ಪ್ಲಾಟ್‌ಫಾರ್ಮ್ ಟಿಕೆಟ್ ದರ ಏರಿಕೆ: ಸರ್ಕಾರದ ಸುಲಿಗೆಗೆ ಸಮರ್ಥನೆ ಎಂದ ಕಾಂಗ್ರೆಸ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಐದು ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ಹೆಚ್ಚಳ ಮಾಡಿರುವ ಸರ್ಕಾರದ ಕ್ರಮವನ್ನು ಕಾಂಗ್ರೆಸ್‌ ವಿರೋಧಿಸಿದೆ. 

ಪ್ಲಾಟ್‌ಫಾರ್ಮ್ ಟಿಕೆಟ್ ದರ ಹೆಚ್ಚಳ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸರ್ಕಾರದ ಸುಲಿಗೆಗೆ ವಿಚಿತ್ರ ಸಮರ್ಥನೆ. ರೈಲ್ವೆ ನಿಲ್ದಾಣಗಳಲ್ಲಿ ಜನದಟ್ಟಣೆ ತಡೆಯಲು ಪ್ಲಾಟ್‌ಫಾರ್ಮ್ ಟಿಕೆಟ್ ದರ ದುಪ್ಪಟ್ಟು ಮಾಡಿದ್ದೇವೆ ಎನ್ನುತ್ತಿದೆ ಸರ್ಕಾರ. ರೈಲ್ವೆ ನಿಲ್ದಾಣಕ್ಕೆ ಬರುವುದೇ ಸಂಚರಿಸಲು ಹೊರತು ಅನಗತ್ಯವಾಗಿ ಬರುವುದಿಲ್ಲ’ ಎಂದು ವಾಗ್ದಾಳಿ ನಡೆಸಿದೆ. 

‘ಜನರ ದರೋಡೆ ನಡೆಸುವ ಅವಕಾಶಕ್ಕಾಗಿ ಕಾಯುವ ಸರ್ಕಾರದ ಈ ಬಾಲಿಶ ಸಮರ್ಥನೆ ಹಾಸ್ಯಾಸ್ಪದವಾಗಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ. 

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ, ಕಂಟೋನ್ಮೆಂಟ್, ಯಶವಂತಪುರ, ಕೃಷ್ಣರಾಜಪುರ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ರೈಲು ನಿಲ್ದಾಣಗಳಲ್ಲಿ ₹10 ಇದ್ದ ಪ್ಲಾಟ್‌ಫಾರ್ಮ್ ಟಿಕೆಟ್ ದರವನ್ನು ₹20ಕ್ಕೆ ಹೆಚ್ಚಿಸಲಾಗಿದೆ. ದಸರಾ ಹಬ್ಬದ ರಜೆ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾದರೆ ಪ್ರಯಾಣಿಕರ ಓಡಾಟಕ್ಕೆ ಕಷ್ಟವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ತಾತ್ಕಾಲಿಕವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು