ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19: ಪ್ಲಾಟ್‌ಫಾರಂ ಟಿಕೆಟ್‌ ದರ ₹50ಕ್ಕೆ ಹೆಚ್ಚಳ!

Last Updated 17 ಮಾರ್ಚ್ 2020, 21:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ನಗರದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಯಂತ್ರಿಸುವ ಉದ್ದೇಶದಿಂದ ರೈಲ್ವೆ ಪ್ಲಾಟ್‌ಫಾರಂ ಟಿಕೆಟ್‌ ದರವನ್ನು ₹50ಗೆ ಹೆಚ್ಚಿಸಲಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಪ್ರಾದೇಶಿಕ ವ್ಯವಸ್ಥಾಪಕರು, ‘ತಕ್ಷಣದಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದ್ದು, ಮಾರ್ಚ್‌ 31ರವರೆಗೆ ಮುಂದುವರಿಯಲಿದೆ’ ಎಂದಿದ್ದಾರೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಯಶವಂತಪುರ, ಕಂಟೋನ್ಮೆಂಟ್, ಕೆ.ಆರ್. ಪುರ, ಯಲಹಂಕ ರೈಲು ನಿಲ್ದಾಣಗಳಲ್ಲಿ ಈ ಪರಿಷ್ಕೃತ ದರ ಅನ್ವಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT