ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನಿಗಳ ಅಭಿನಂದಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಇಸ್ರೊಗೆ ಭೇಟಿ

Published 26 ಆಗಸ್ಟ್ 2023, 1:53 IST
Last Updated 26 ಆಗಸ್ಟ್ 2023, 1:53 IST
ಅಕ್ಷರ ಗಾತ್ರ

ಬೆಂಗಳೂರು: ಪೀಣ್ಯದಲ್ಲಿರುವ ಇಸ್ರೊ ಟೆಲೆಮೆಟ್ರಿ ಟ್ರ್ಯಾಕಿಂಗ್ ಅಂಡ್‌ ಕಮಾಂಡ್ ನೆಟ್‌ವರ್ಕ್‌ (ಐಎಸ್‌ಟಿಆರ್‌ಎಸಿ) ಕೇಂದ್ರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ (ಆಗಸ್ಟ್ 26) ಭೇಟಿ ನೀಡಿದರು.

ಪ್ರಧಾನಿ ಅವರು ವಿಶೇಷ ವಿಮಾನದಲ್ಲಿ ಎಚ್​ಎಎಲ್ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ಆಗಮಿಸಿದರು.

ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಯವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.

ಚಂದ್ರಯಾನ-3ರ ಯಶಸ್ಸಿಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಇಸ್ರೋದ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಬಂದ ಅವರು, ಹೆಚ್​ಎಎಲ್ ಏರ್​ಪೋರ್ಟ್​ ಹೊರಗಡೆ ಜನರನ್ನು ಉದ್ದೇಶಿಸಿ ಮಾತನಾಡಿದರು.

‘ದೂರದ ದೇಶದಿಂದ ನೇರ ಇಲ್ಲಿಗೆ ಬಂದೆ. ಭಾರತದ ಸೂರ್ಯೋದಯವಾಗುತ್ತಿರುವ ಈ ಹೊತ್ತಿನಲ್ಲಿ ಬೆಂಗಳೂರಿಗೆ ಬಂದಿರುವೆ. ನಮ್ಮ ದೇಶದ ವಿಜ್ಞಾನಿಗಳ ಸಾಧನೆಯಿಂದ ಬಹಳ ಸಂತಸವಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು. 

ಮೋದಿ ಅವರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಬೆಳಿಗ್ಗೆ 4:30  ರಿಂದ ಬೆಳಿಗ್ಗೆ 9:30ರ ವರೆಗೆ ಕೆಲ ರಸ್ತೆಗಳಲ್ಲಿ ಸಾರ್ವಜನಿಕರ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಜೊತೆಗೆ, ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ಸಂಚಾರ ಪೋಲಿಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT