ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗಾಂಧಿ ಆಶಯ ಈಡೇರಿಸಲು ಮೋದಿ ಶ್ರಮ: ಬಿ.ವೈ. ವಿಜಯೇಂದ್ರ

Published : 2 ಅಕ್ಟೋಬರ್ 2024, 15:57 IST
Last Updated : 2 ಅಕ್ಟೋಬರ್ 2024, 15:57 IST
ಫಾಲೋ ಮಾಡಿ
Comments

ಬೆಂಗಳೂರು: ‘ಮಹಾತ್ಮ ಗಾಂಧೀಜಿ ಅವರು ಕಂಡಿದ್ದ ರಾಮರಾಜ್ಯದ ಕನಸನ್ನು ನನಸಾಗಿಸಲು ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳಿಂದ ಪರಿಶ್ರಮ ಪಡುತ್ತಿದ್ದಾರೆ. ದೇಶವನ್ನು ದೂರದೃಷ್ಟಿಯಿಂದ ಮುನ್ನಡೆಸುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೋದಿ ಅವರ ಜನ್ಮದಿನವಾದ ಸೆ.17ರಿಂದ ಮಹಾತ್ಮ ಗಾಂಧಿ-ಶಾಸ್ತ್ರಿಯವರ ಜನ್ಮದಿನವಾದ ಅ.2ರ ವರೆಗೆ ಸೇವಾ ಪಾಕ್ಷಿಕವನ್ನು ಆಚರಿಸಲಾಯಿತು. ದೀನ್ ದಯಾಳ್ ಉಪಾಧ್ಯ ಅವರ ಜನ್ಮದಿನವನ್ನೂ ಪರಿಗಣಿಸಿ ರಕ್ತದಾನ ಶಿಬಿರ, ಸಸಿ ನೆಡುವುದು ಸೇರಿ ವಿವಿಧ ಸೇವಾ ಕಾರ್ಯಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಪಿ.ಸಿ. ಮೋಹನ್, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಘಟಕದ ಖಜಾಂಚಿ ಸುಬ್ಬ ನರಸಿಂಹ, ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಕಾರ್ಯಾಲಯ ಸಹ ಕಾರ್ಯದರ್ಶಿ ವಿಶ್ವನಾಥ್ ಅಣಜಿ, ಬೆಂಗಳೂರು ಕೇಂದ್ರ ಜಿಲ್ಲಾ ಘಟಕದ ಅಧ್ಯಕ್ಷ ಸಪ್ತಗಿರಿ ಗೌಡ ಉಪಸ್ಥಿತರಿದ್ದರು.

ಸ್ವಚ್ಛತಾ ಅಭಿಯಾನ: ‘ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಪ್ರತಿಯೊಂದು ಹೋರಾಟವನ್ನೂ ಜನಾಂದೋಲನವಾಗಿ ಪರಿವರ್ತಿಸಿದ್ದರು. ಅದೇ ಮಾದರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛತಾ ಅಭಿಯಾನವನ್ನು ಆಂದೋಲನವಾಗಿ ಪರಿವರ್ತಿಸಲು ಮುಂದಾಗಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ಗಾಂಧಿ ಜಯಂತಿ ಪ್ರಯುಕ್ತ ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾ ಘಟಕದ ವತಿಯಿಂದ ಬಳೆಪೇಟೆ ನಿಮಿಷಾಂಬ ದೇವಸ್ಥಾನ ಹಾಗೂ ಸ್ವಾಮಿ ವಿವೇಕಾನಂದ ಪ್ರತಿಮೆ ಬಳಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮ ಮತ್ತು ಸದಸ್ಯತ್ವ ಮಹಾ ಅಭಿಯಾನದಲ್ಲಿ ಅವರು ಮಾತನಾಡಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ಯಡಿಯೂರಪ್ಪ ಅವರನ್ನು ಹಿಂದೆ ರಾಜೀನಾಮೆ ಕೊಡುವಂತೆ ಸಿದ್ದರಾಮಯ್ಯ ಆಗ್ರಹಿಸಿದ್ದರು. ಅದೇ ರೀತಿಯ ನಿರ್ಧಾರವನ್ನು ಇದೀಗ ಸಿದ್ದರಾಮಯ್ಯ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT