ಪೀಣ್ಯ ದಾಸರಹಳ್ಳಿ: ‘ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಭದ್ರತಾ ಖಾತರಿ ಇಲ್ಲದೆ ₹ 10 ಸಾವಿರ ಸಹಾಯ ನೀಡಲಾಗುತ್ತದೆ. ಅದಕ್ಕಾಗಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲಾಗುತ್ತಿದೆ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.

ಬಾಗಲಗುಂಟೆಯ ಜಿಬಿಎ ಕಚೇರಿಯ ಆವರಣದಲ್ಲಿ ಪಿಎಂ ಸ್ವನಿಧಿ ಯೋಜನೆಯ ಆಧಾರದ ಅಡಿಯಲ್ಲಿ ಕ್ಷೇತ್ರದ ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ ನೀಡಲಾಗುವ ಗುರುತಿನ ಕಾರ್ಡ್ ನೀಡಿ ಮಾತನಾಡಿದರು.

‘ಎಲ್ಲೆಂದರಲ್ಲಿ ತಳ್ಳುವ ಗಾಡಿ ನಿಲ್ಲಿಸಿ ವ್ಯಾಪಾರ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ. ಸಂಚಾರ ಸಮಸ್ಯೆ, ಅಪಘಾತ ವಾಗುವ ಸ್ಥಳದಲ್ಲಿ ವ್ಯಾಪಾರ ಮಾಡದೆ ವ್ಯವಸ್ಥಿತ ಸ್ಥಳದಲ್ಲಿ ವ್ಯಾಪಾರ ಮಾಡಿ ನಿಮ್ಮ ಬದುಕನ್ನು ರೂಪಿಸಿಕೊಳ್ಳಿ’ ಎಂದು ಸಲಹೆ ನೀಡಿದರು.

‘ಸುಮಾರು ವರ್ಷಗಳಿಂದ ದಾಸರಹಳ್ಳಿ ಮೆಟ್ರೊ ಸೇತುವೆ ಕೆಳಗಡೆ ನೂರಾರು ವ್ಯಾಪಾರಿಗಳು ವ್ಯಾಪಾರ ಮಾಡುತ್ತಾ ಬದುಕು ಕಟ್ಟಿಕೊಂಡಿದ್ದಾರೆ. ಅವರ ಅನುಕೂಲಕ್ಕಾಗಿ 8X10 ಅಡಿ ಶೆಡ್ ವ್ಯವಸ್ಥೆ ಮಾಡಿ, ವಿದ್ಯುತ್ ಸಂಪರ್ಕ ನೀಡಿದರೆ ಪ್ರತಿ ತಿಂಗಳು ಬಾಡಿಗೆ ನೀಡಲು ವ್ಯಾಪಾರಿಗಳು ಮುಂದಾಗಿದ್ದಾರೆ. ಮೆಟ್ರೊ ವ್ಯವಸ್ಥಾಪಕ ನಿರ್ದೇಶಕರಿಗೆ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.