ಬೆಂಗಳೂರು: ‘ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಯಡಿ (ಪಿಎಂಎಫ್ಎಂಇ) ಸಹಾಯಧನ ಪಡೆಯಲು ಬ್ಯಾಂಕ್ಗಳಿಗೆ ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು’ ಎಂದು ರಾಜ್ಯಮಟ್ಟದ ಬ್ಯಾಂಕರ್ಗಳ ಸಮಿತಿಯ (ಎಸ್ಎಲ್ಬಿಸಿ) ಸಂಚಾಲಕ ಎಂ. ಭಾಸ್ಕರ್ ಚಕ್ರವರ್ತಿ, ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಅವರು ಸೂಚನೆ ನೀಡಿದ್ದಾರೆ.

ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಾರಿ ಒಟ್ಟು 6,215 ಅರ್ಜಿಗಳು ಕೆಪೆಕ್ಗೆ ಬಂದಿವೆ. ಈ ಪೈಕಿ 4,150 ಅರ್ಜಿಗಳನ್ನು ವಿವಿಧ ಬ್ಯಾಂಕ್ಗಳಿಗೆ ಕಳುಹಿಸಲಾಗಿದೆ. 2,600ಕ್ಕೂ ಹೆಚ್ಚು ಅರ್ಜಿಗಳು ಪರಿಶೀಲನಾ ಹಂತದಲ್ಲಿವೆ. ಇದರಲ್ಲಿ 1,682 ಮಂದಿಗೆ ಸಾಲ ಮಂಜೂರಾಗಿದ್ದು, ಈಗಾಗಲೇ 1200 ಫಲಾನುಭವಿಗಳು ಸಾಲ ಪಡೆದುಕೊಂಡಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025–26ನೇ ಸಾಲಿನಲ್ಲಿ ರಾಜ್ಯದಲ್ಲಿ 5 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವಂತೆ ಸೂಚಿಸಿದ್ದಾರೆ. ಬಜೆಟ್ನಲ್ಲಿ ಇದಕ್ಕಾಗಿಯೇ ₹206 ಕೋಟಿ ಅನುದಾನ ಒದಗಿಸಲಾಗಿದೆ’ ಎಂದರು.

‘ರಾಷ್ಟ್ರೀಕೃತ ಬ್ಯಾಂಕ್ಗಳಾದ ಕೆನರಾ ಬ್ಯಾಂಕ್, ಭಾರತೀಯ ಸ್ಟೇಟ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಸೇರಿದಂತೆ ಖಾಸಗಿ, ಸಹಕಾರಿ ಬ್ಯಾಂಕ್ಗಳಲ್ಲಿ ಪಿಎಂಎಫ್ಎಂಇ ಯೋಜನೆಯಡಿ ಸಾಲ ಪಡೆಯಲು ಅವಕಾಶ ಇದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಬ್ಯಾಂಕ್ಗಳ ಪಾತ್ರ ಮಹತ್ವದಾಗಿದೆ. ಫಲಾನುಭವಿಗಳಿಗೆ ಬ್ಯಾಂಕ್ನಲ್ಲಿ ಸಾಲ ಮಂಜೂರಾದರೆ ಮಾತ್ರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಾಯಧನ ಸಿಗಲಿದೆ’ ಎಂದು ತಿಳಿಸಿದರು.

‘ಪಿಎಂಎಫ್ಎಂಇ ಯೋಜನೆಯಡಿ ಗರಿಷ್ಠ ₹15 ಲಕ್ಷ ಸಹಾಯಧನ ಸಿಗುತ್ತದೆ. ಇದರಲ್ಲಿ ಕೇಂದ್ರ ಸರ್ಕಾರ ₹6 ಲಕ್ಷ ನೀಡಿದರೆ, ರಾಜ್ಯ ಸರ್ಕಾರ ₹9 ಲಕ್ಷ ನೀಡುತ್ತದೆ. ಮೂಲಸೌಕರ್ಯ ಕಲ್ಪಿಸಿಕೊಳ್ಳಲು ಎಫ್ಪಿಒಗಳಿಗೆ ಗರಿಷ್ಠ ₹3 ಕೋಟಿವರೆಗೆ ಸಹಾಯಧನ ಸಿಗುತ್ತದೆ. ಉತ್ಪನ್ನಗಳ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆಗೆ ಶೇ 50ರಷ್ಟು ಸಹಾಯಧನ ನೀಡಲಾಗುತ್ತದೆ’ ಎಂದು ಸಿ.ಎನ್. ಶಿವಪ್ರಕಾಶ್ ವಿವರಿಸಿದರು.

Highlights - 5 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪಿಸುವ ಗುರಿ ಗರಿಷ್ಠ ₹15 ಲಕ್ಷ ಸಹಾಯಧನ ಉತ್ಪನ್ನಗಳ ಬ್ರ್ಯಾಂಡಿಂಗ್ಗೆ ಶೇ 50ರಷ್ಟು ಸಹಾಯಧನ

Quote - ಪಿಎಂಎಫ್ಎಂಇ ಯೋಜನೆಯಡಿ ಸಾಲ ನೀಡುವಾಗ ಫಲಾನುಭವಿಗಳ ಸಿಬಿಲ್ ಸ್ಕೋರ್ ಅನ್ನು ಬ್ಯಾಂಕ್ಗಳು ಪರಿಗಣಿಸುವಂತಿಲ್ಲ ಸಿ.ಎನ್. ಶಿವಪ್ರಕಾಶ್ ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.