ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಪೋಕ್ಸೊ ಪ್ರಕರಣದ ಆರೋಪಿ ಮೃತದೇಹ ಪತ್ತೆ

Published 11 ಮೇ 2024, 0:09 IST
Last Updated 11 ಮೇ 2024, 0:09 IST
ಅಕ್ಷರ ಗಾತ್ರ

ಬೆಂಗಳೂರು: ಸಂಪಂಗಿರಾಮನಗರ ಠಾಣೆ ವ್ಯಾಪ್ತಿಯಲ್ಲಿ ಸತ್ಯ (20) ಎಂಬುವವರ ಮೃತದೇಹ ಪತ್ತೆಯಾಗಿದ್ದು, ಯುಡಿಆರ್ (ಅಸಹಜ ಸಾವು) ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

‘ಸ್ಥಳೀಯ ನಿವಾಸಿ ಸತ್ಯ, ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ 2023ರಲ್ಲಿ ಪ್ರಕರಣ ದಾಖಲಿಸಿಕೊಂಡು, ಸತ್ಯನನ್ನು ಬಂಧಿಸಲಾಗಿತ್ತು. ಜಾಮೀನು ಪಡೆದಿದ್ದ ಆರೋಪಿ ಜೈಲಿನಿಂದ ಹೊರಗೆ ಬಂದಿದ್ದ’ ಎಂದು ಪೊಲೀಸರು ಹೇಳಿದರು.

‘ಸತ್ಯ ಮೃತದೇಹ ಗುರುವಾರ ಪತ್ತೆಯಾಗಿದೆ. ಈ ಬಗ್ಗೆ ಸಂಬಂಧಿಕರು ಹಾಗೂ ಸ್ಥಳೀಯರ ಹೇಳಿಕೆ ಪಡೆಯಲಾಗಿದೆ. ಈ ಸಾವಿಗೆ ಕಾರಣ ಏನು? ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪರೀಕ್ಷೆ ವರದಿ ಬಂದ ನಂತರವೇ ಸಾವಿನ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT