ಪೋಕ್ಸೊ: ಆಟೊ ಚಾಲಕ ಸೆರೆ

7

ಪೋಕ್ಸೊ: ಆಟೊ ಚಾಲಕ ಸೆರೆ

Published:
Updated:

ಬೆಂಗಳೂರು: ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸುಹೇಲ್ (29) ಎಂಬಾತನನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ನಿವಾಸಿಯಾದ ಆರೋಪಿ, ಆಟೊ ಚಾಲಕ. ಸಂತ್ರಸ್ತೆಯ ಪೋಷಕರು ನೀಡಿದ ದೂರಿನನ್ವಯ ಆರೋಪಿ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

‘ಬಾಲಕಿಯ ಸಂಬಂಧಿಯೂ ಆದ ಆರೋಪಿ, ಆಕೆಯ ಮನೆಯ ಸಮೀಪವೇ ವಾಸವಿದ್ದ. ಆಗಾಗ ಬಾಲಕಿಯ ಮನೆಗೂ ಹೋಗಿ ಬರುತ್ತಿದ್ದ. ಭಾನುವಾರ ಬಾಲಕಿಯನ್ನು ಮನೆಯಿಂದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ ಆರೋಪಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ’ ಎಂದು ವಿವರಿಸಿದರು. 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !